HEALTH TIPS

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು ಮಂಜೂರು

ನವದೆಹಲಿ: ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ.


'ಶಾಂತಿ ಪಾಲನಾ ಒಪ್ಪಂದ'ಕ್ಕೆ ಸಹಿ ಹಾಕುವಂತೆ ದೀಪ್ಕೆಗೆ ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿಯ ಕನ್ನಾಟ್‌ ಪ್ಲೇಸ್‌ನ ಸೆಂಟ್ರಲ್‌ ಪಾರ್ಕ್‌ನಲ್ಲಿ ಸಿಜೆಪಿ ಶುಕ್ರವಾರ ಆಯೋಜಿಸಿದ್ದ 'ಲೆಹರಾ ದೋ ತಿರಂಗಾ' (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅಭಿಜಿತ್ ದೀಪ್ಕೆ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ (ಐಸಾ) ಮುಖ್ಯಸ್ಥೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. 

ದೀಪ್ಕೆ ಅವರನ್ನು ಝಂಡೆವಾಲನ್‌ನಲ್ಲಿರುವ ನಿವಾಸದಿಂದ ವಶಕ್ಕೆ ಪಡೆಯಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು, 'ನೀವು ನವದೆಹಲಿಗೆ ಹೋಗುವಂತಿಲ್ಲ. ನಾವು ನಿಮ್ಮನ್ನು ವಶಕ್ಕೆ ಪಡೆಯುತ್ತಿದ್ದೇವೆ' ಎಂದು ಹೇಳಿದ್ದರು.

ಅದಕ್ಕೆ ಪ್ರತಿಕ್ರಿಯಿಸಿದ ದೀಪ್ಕೆ, 'ನಾನು ನವದೆಹಲಿಗೆ ಹೋಗಲು ಸಾಧ್ಯವಿಲ್ಲದಿರಬಹುದು. ಆದರೆ, ಬೇರೆಡೆಗೆ ಹೋಗಬಹುದಲ್ಲವೇ?, ನಾನು ಯಾವ ಕಾನೂನನ್ನು ಉಲ್ಲಂಘಿಸಿದ್ದೇನೆ' ಎಂದು ಪ್ರಶ್ನಿಸಿದ್ದರು. ಬಳಿಕ ಅವರನ್ನು ಬಲವಂತವಾಗಿ ಪೊಲೀಸ್ ವಾಹನವೊಂದರಲ್ಲಿ ಕೂರಿಸಿ, ಜಾಫರ್‌ಪುರ ಕಲನ್ ಠಾಣೆಗೆ ಕರೆದೊಯ್ಯಲಾಗಿತ್ತು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries