HEALTH TIPS

ಸೌದಿ ಅರೇಬಿಯಾದಲ್ಲಿ ಹೆಚ್ಚಿದ ಉದ್ವಿಗ್ನತೆ: ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ದುಬೈ: ಗಲ್ಫ್ ರಾಷ್ಟ್ರದಲ್ಲಿ ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಭಾರತೀಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಅನಗತ್ಯ ಪ್ರಯಾಣ ಕೈಬಿಡುವಂತೆ ಭಾರತದ ರಾಯಭಾರ ಕಚೇರಿ ಸಲಹೆ ನೀಡಿದೆ.


ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಗೆ ಬರುವಂತೆ ಮತ್ತು ಅಧಿಕೃತ ಮಾಧ್ಯಮಗಳ ಮೂಲಕ ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. 

ಸೌದಿ ಅರೇಬಿಯಾ ಮತ್ತು ಇರಾನ್ ಬೆಂಬಲಿತ ಹೂಥಿ ಬಂಡುಕೋರರು ನಡುವೆ ಇತ್ತೀಚೆಗೆ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಿಸಿದೆ.

ಕಳೆದೊಂದು ವಾರದಿಂದ ಇರಾನ್‌ ಬೆಂಬಲಿತ ಹೂಥಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಹೂಥಿಗಳು ಸೌದಿ ಅರೇಬಿಯಾದ ಗಡಿ ಭಾಗದ ತೈಲ, ಇಂಧನ ಘಟಕಗಳು, ನಾಗರಿಕ ಮೂಲಸೌಕರ್ಯ ಗುರಿಯಾಗಿಸಿ ಡ್ರೋನ್‌, ಕ್ಷಿಪಣಿ ದಾಳಿ ಮುಂದುವರಿಸಿವೆ.

ಸದ್ಯ ನಡೆಯುತ್ತಿರುವ ಘಟನೆಗಳಿಗೆ ಸಂಬಂಧಿಸಿದ ವಿಡಿಯೊಗಳು ಅಥವಾ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಅಥವಾ ಪ್ರಚೋದಿಸದಂತೆ ಭಾರತೀಯ ನಾಗರಿಕರಿಗೆ ಕಟ್ಟುನಿಟ್ಟಿನ ಸಲಹೆ ನೀಡಲಾಗಿದೆ.

ತುರ್ತು ಸಹಾಯಕ್ಕಾಗಿ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿ 8002471234ಗೆ ಸಂಪರ್ಕಿಸಬಹುದು ಎಂದು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಸೌದಿ ವಿಮಾನ ನಿಲ್ದಾಣದ ಮೇಲೆ ದಾಳಿ...

'ಸೌದಿ ಅರೇಬಿಯಾದ ಅಭಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಿಯಾದ್‌ನ ಕಿಂಗ್‌ ಖಾಲಿದ್ ವಿಮಾನ ನಿಲ್ದಾಣದ ಮೇಲೆ ಹೂಥಿ ಬಂಡುಕೋರರು ದಾಳಿ ನಡೆಸಿದ್ದಾರೆ. ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ.

'ನಾಗರಿಕ ಮೂಲಸೌರ್ಕಯ ಗುರಿಯಾಗಿಸಿ ದಾಳಿ ನಡೆಸುವುದು ಸ್ವೀಕಾರಾರ್ಹವಲ್ಲ' ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹೂಥಿ ಬಂಡುಕೋರರು ಅಭಾ ವಿಮಾನ ನಿಲ್ದಾಣದ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಿಂಗ್‌ ಖಾಲಿದ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries