HEALTH TIPS

ಎಸ್‌ಐಆರ್‌: ನಿವೃತ್ತ ನ್ಯಾಯಮೂರ್ತಿಗಳ ಸಮರ್ಥನೆ

ನವದೆಹಲಿ: ಸುಪ್ರೀಂ ಕೋರ್ಟ್‌ ಮತ್ತು ವಿವಿಧ ಹೈಕೋರ್ಟ್‌ಗಳ 42 ನಿವೃತ್ತ ನ್ಯಾಯಮೂರ್ತಿಗಳು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಕಾನೂನುಬದ್ಧ ಪ್ರಕ್ರಿಯೆ ಎಂದು ಹೇಳಿದ್ದಾರೆ.


ಭಾರತದ ಸಾಂವಿಧಾನಿಕ ಸಂಸ್ಥೆಗಳು 'ನಿರಂತರ ದಾಳಿಗೆ' ಒಳಗಾಗಿವೆ ಮತ್ತು ಭಾರತೀಯ ಚುನಾವಣಾ ಆಯೋಗವು ದಾಳಿಯ ಕೇಂದ್ರಬಿಂದುವಾಗಿದೆ ಎಂದು ದೇಶದ ಜನರನ್ನು ಉದ್ದೇಶಿಸಿ ಬರೆದ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ. 

'ನಾವು ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧವಾಗಿ ಮಾತನಾಡುತ್ತಿಲ್ಲ' ಎಂದೂ ಹೇಳಿದ್ದಾರೆ.

ಚುನಾವಣಾ ಆಯೋಗ ಸೇರಿದಂತೆ ವಿವಿಧ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ಹೋರಾಟವನ್ನು 'ಸಾಕ್ಷ್ಯಗಳಿಲ್ಲದೆ ನಡೆಯುತ್ತಿರುವ ಆಂದೋಲನ' ಎಂದು ಪತ್ರದಲ್ಲಿ ಬಣ್ಣಿಸಿದ್ದಾರೆ.

'ಸಂಸ್ಥೆಗಳ ವಿರುದ್ಧದ ಟೀಕೆ ಪ್ರಜಾಸತ್ತಾತ್ಮಕ ಹಕ್ಕು. ಆದರೆ, ಅವುಗಳನ್ನು ಹೀಗಳೆಯುವುದು ಸರಿಯಲ್ಲ. ಈಗ ಸಾರ್ವಜನಿಕ ವೇದಿಕೆಗಳಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು 'ಕಳ್ಳರು', 'ಕೈಗೊಂಬೆಗಳು' ಮತ್ತು 'ರಾಜಿ ಮಾಡಿಕೊಂಡವರು' ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ' ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

'ಈಗ ನಡೆಯುತ್ತಿರುವ ದಾಳಿಗಳು ತಾರ್ಕಿಕ ಟೀಕೆಗಳಲ್ಲ. ಬದಲಾಗಿ, ಸ್ಥಾಪಿತ ರಾಜಕೀಯ ಹಿತಾಸಕ್ತಿಗಳಿಂದ ನಡೆಸಲ್ಪಡುವ 'ವ್ಯವಸ್ಥಿತ ಅಭಿಯಾನ'ದಂತೆ ತೋರುತ್ತದೆ ಎಂದಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries