ನವದೆಹಲಿ: ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
'2026ರ ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಕ್ರೀಡಾಪಟುಗಳಿಂದ ಅತ್ಯುತ್ತಮ ಪ್ರದರ್ಶನ ಮೂಡಿಬಂದಿದೆ.
ಸಮರ್ಪಣೆ ಮತ್ತು ಬದ್ಧತೆಯಿಂದ ದೇಶವನ್ನು ಪ್ರತಿನಿಧಿಸಿದ ಪ್ರತಿಯೊಬ್ಬರ ಬಗ್ಗೆಯೂ ಹೆಮ್ಮೆ ಎನಿಸುತ್ತಿದೆ' ಎಂದು ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ನಮ್ಮ ಎಲ್ಲಾ ಪದಕ ವಿಜೇತರಿಗೆ, ವಿಶೇಷವಾಗಿ ಪ್ರಭಾವಶಾಲಿ ಪ್ರದರ್ಶನ ನೀಡಿದ ನಮ್ಮ ಮಹಿಳಾ ಕ್ರೀಡಾಪಟುಗಳಿಗೆ ಅಭಿನಂದನೆ. ಕ್ರೀಡಾಪಟುಗಳ ಕಠಿಣ ಪರಿಶ್ರಮ ಮತ್ತು ಕೌಶಲವು ದೇಶಕ್ಕೆ ಅಪಾರ ಕೀರ್ತಿಯನ್ನು ತಂದಿದೆ. ಕ್ರೀಡಾಪಟುಗಳ ಕ್ರೀಡಾ ಪಯಣದಲ್ಲಿ ನಿರಂತರ ಯಶಸ್ಸು ಸಿಗಲಿ ಮತ್ತು ಮತ್ತಷ್ಟು ಸಾಧನೆ ಮಾಡುವಂತಾಗಲಿ' ಎಂದು ರಾಷ್ಟ್ರಪತಿ ಅವರು ಶುಭ ಹಾರೈಸಿದ್ದಾರೆ.

