HEALTH TIPS

ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ಅದ್ಧೂರಿ ಚಾಲನೆ: ಧ್ವಜಾರೋಹಣ ನೆರವೇರಿಕೆ; ವೇದಿಕೇತರ ಸ್ಪರ್ಧೆಗಳಿಗೆ ಚಾಲನೆ


ಬದಿಯಡ್ಕ
: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಶಾಲಾ ಆಡಳಿತ ಮಂಡಳಿಯ ಸಹಕಾರ್ಯದರ್ಶಿ ರಮೇಶ್ ಕುಂಡ್ಯಪ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಶಾಹಿದಾ ಸ್ವಾಗತಿಸಿದರು.

ಸಂಘಟನಾ ಸಮಿತಿಯ ಅಧ್ಯಕ್ಷರು ಹಾಗೂ ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಿ. ಶಂಕರ, ಪಂಚಾಯತ್ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ, ಕಾರ್ಯದರ್ಶಿ ಶ್ಯಾಮಪ್ರಸಾದ್ ಮಾನ್ಯ, ಶಾಲಾ ಪ್ರಾಂಶುಪಾಲ ಎಂ.ಜಿ. ಕೃಷ್ಣ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹಮೀದ್ ಕೆಡೆಂಜಿ, ಉಪಾಧ್ಯಕ್ಷ ಆನಂದ ಮವ್ವಾರು, ಶರೀಫ್ ಪಾಲೆಕ್ಕಾರು, ಶಾಫಿ ಚೂರಿಪಳ್ಳ, ಅನಂತ್ ಬೀವಿ, ಈಶ್ವರ ಭಟ್, ಪೆರ್ಮುದೆ ನಾರಾಯಣ ಭಟ್, ಮೈರ್ಕಳ ಜಗನ್ನಾಥ ರೈ, ಪೆರಡಾಲ ಚಂದ್ರನ್ ಪೆÇಯ್ಯಕಂಡ, ಚಂದ್ರಶೇಖರ ಕುರುಪ್, ಸಾಬಿತ್, ಬದಿಯಡ್ಕ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳಾದ ಬಾಲಕೃಷ್ಣ ಶೆಟ್ಟಿ ಕೆ., ಫೌಸಿಯಾ, ಶಾಹಿನಾ, ಶ್ಯಾಮಪ್ರಸಾದ್ ಸರಳಿ, ಉಪಜಿಲ್ಲಾ ಶಿಕ್ಷಣಾಧಿಕಾರಿ ಅಶೋಕ್, ಕಾರ್ಯಕ್ರಮ ಸಮಿತಿಯ ಸಂಚಾಲಕ ಪ್ರಭಾಕರನ್ ನಾಯರ್, ಸಹಾಯಕ ಮುಖ್ಯೋಪಾಧ್ಯಾಯ ಉಣ್ಣಿಕೃಷ್ಣನ್ ಸೇರಿದಂತೆ ಶಿಕ್ಷಕರು, ವಿವಿಧ ಶಾಲೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಐದು ದಿನಗಳ ಕಲೋತ್ಸವದಲ್ಲಿ 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ನಿರೀಕ್ಷೆ

ಕುಂಬಳೆ ಉಪಜಿಲ್ಲೆಯ 94 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಈ ಕಲೋತ್ಸವವು ಐದು ದಿನಗಳ ಕಾಲ ನಡೆಯಲಿದೆ. ಸುಮಾರು 20,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನವೆಂಬರ್ 2 ರಂದು ಸಂಜೆ 4ಕ್ಕೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಅವರು ಕಲೋತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries