ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ನೀವು ಪಾಲಿಸಲೇಬೇಕಾದ 7 ಟಿಪ್ಸ್
ಕೊಲೆಸ್ಟ್ರಾಲ್ ಎನ್ನುವುದು ಮೇಣದಂತಹ ವಸ್ತುವಾಗಿದೆ. ಜೀವಕೋಶಗಳ ನಿರ್ಮಾಣ, ಹಾರ್ಮೋನ್ ಉತ್ಪಾದನೆ ಮತ್ತು ಜೀರ್ಣಕ್ರಿಯೆಗಾಗಿ ನಮ್ಮ ದೇಹವೇ ಇದನ್ನು ಉತ್ಪಾದಿಸುತ್ತದೆ. ರಕ್ತದಲ್ಲಿ ಲಿಪೊಪ್ರೋಟೀನ್‌ಗಳ ಮೂಲಕ ಸಂಚರಿಸುವ ಇದನ್ನು ಎಲ್‌ಡಿಎಲ್ (ಕೆಟ್ಟ) ಮತ್ತು ಎಚ್‌ಡಿಎಲ್ (ಒಳ್ಳೆಯ) ಕೊಲೆಸ್ಟ್ರಾಲ್ ಎಂದು ವಿಂಗಡಿಸಲಾಗುತ್ತದೆ.
ಒತ್ತಡವು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ
ಅತಿಯಾದ ಒತ್ತಡವು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ದೀರ್ಘಕಾಲದ ಒತ್ತಡವು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಯೋಗ ಮತ್ತು ಧ್ಯಾನ ಮಾಡುವುದರಿಂದ ಒತ್ತಡವನ್ನು ಸುಲಭವಾಗಿ ಕಡಿಮೆ ಮಾಡಬಹುದು.
ನಿಯಮಿತವಾಗಿ ಕೊಲೆಸ್ಟ್ರಾಲ್ ತಪಾಸಣೆ ಮಾಡಿಸುವುದು ಅತ್ಯಗತ್ಯ
ವಯಸ್ಸಾಗುತ್ತಿದ್ದಂತೆ ಅಥವಾ ಕುಟುಂಬದಲ್ಲಿ ಯಾರಿಗಾದರೂ ಹೃದಯರೋಗವಿದ್ದರೆ ನಿಯಮಿತವಾಗಿ ಕೊಲೆಸ್ಟ್ರಾಲ್ ತಪಾಸಣೆ ಮಾಡಿಸುವುದು ಅತ್ಯಗತ್ಯ. ವೈದ್ಯರನ್ನು ಭೇಟಿಯಾಗುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಟ್ರ್ಯಾಕ್ ಮಾಡಬಹುದು ಮತ್ತು ಜೀವನಶೈಲಿ ಬದಲಾವಣೆ ಅಥವಾ ಔಷಧಿಗಳ ಅಗತ್ಯವಿದೆಯೇ ಎಂದು ತಿಳಿಯಬಹುದು.
ಮದ್ಯಪಾನವು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಮದ್ಯಪಾನವು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನೀವು ಧೂಮಪಾನಿಗಳಾಗಿದ್ದರೆ, ತಕ್ಷಣ ಆ ಅಭ್ಯಾಸ ಬಿಟ್ಟುಬಿಡಿ. ಇದು ಎಚ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿ, ಒಟ್ಟಾರೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ತೂಕ ಇಳಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ
ಆರೋಗ್ಯಕರ ಮೈತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ತೂಕ ನಿಯಂತ್ರಣದಲ್ಲಿಡುವುದರಿಂದ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಮತ್ತು ಒಟ್ಟಾರೆ ಹೃದಯದ ಆರೋಗ್ಯ ಸುಧಾರಿಸುತ್ತದೆ.
ವಾಕಿಂಗ್, ಜಾಗಿಂಗ್, ಸೈಕ್ಲಿಂಗ್ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ
ವಾರಕ್ಕೆ ಕನಿಷ್ಠ 150 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಿ. ವಾಕಿಂಗ್, ಜಾಗಿಂಗ್, ಸೈಕ್ಲಿಂಗ್ ಅಥವಾ ಈಜುವಿಕೆಯು ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಜೊತೆಗೆ, ರಕ್ತಪ್ರವಾಹದಿಂದ ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಇದು ನೆರವಾಗುತ್ತದೆ.
ಹಣ್ಣು, ತರಕಾರಿ, ಧಾನ್ಯಗಳು ಮತ್ತು ಕಾಳುಗಳನ್ನು ಆಹಾರದಲ್ಲಿ ಸೇರಿಸಿ
ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಕಾಳುಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಿ. ಆಲಿವ್ ಎಣ್ಣೆ, ಆವಕಾಡೊ ಮತ್ತು ನಟ್ಸ್‌ನಲ್ಲಿರುವ ಆರೋಗ್ಯಕರ ಕೊಬ್ಬುಗಳು ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತವೆ.



