HEALTH TIPS

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಸಂಸ್ಮರಣಾ ಸಮಾರಂಭ

ಕಾಸರಗೋಡು: ಸೃಜನಶೀಲ ಲೇಖಕರಾಗಿ, ಸಂಶೋಧಕರಾಗಿ ಭಾಷೆ, ವ್ಯಾಕರಣ ಹಾಗೂ ಸಂಪಾದನಾ ಕ್ಷೇತ್ರಕ್ಕೆ ಡಾ. ಶ್ರೀಕೃಷ್ಣ ಭಟ್ ಅರ್ತಿಕಜೆ ಅವರು ನೀಡಿದ ಕೊಡುಗೆ ಅಪಾರ ಎಂದು ನಿವೃತ್ತ ಪ್ರಾಂಶುಪಾಲ ಪೆÇ್ರ. ಪಿ. ಎನ್ ಮೂಡಿತ್ತಾಯ ತಿಳಿಸಿದ್ದಾರೆ. 


ಅವರು ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀಕೃಷ್ಣ ಭಟ್ ಅರ್ತಿಕಜೆ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಮದ್ರಾಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಮತ್ತು ವಿಭಾಗ ಮುಖ್ಯಸ್ಥರಾಗಿ ಅವರು ಸಲ್ಲಿಸಿದ ಸೇವೆ ಅನನ್ಯ. ಅವರು ಮಾಡಿರುವ ಮೌಲಿಕ ಸಂಶೋಧನಾ ಕೆಲಸಗಳು ಇಂದಿಗೂ ನಾಡಿನ ವಿದ್ವಾಂಸರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿವೆ.  ತಮಿಳುನಾಡಿನ ನೆಲದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಕಟ್ಟಿ ಬೆಳೆಸುವಲ್ಲಿ ಅವರ ಪರಿಶ್ರಮ ಅಪಾರವಾದುದು ಎಂದು ತಿಳಿಸಿದರು.  

ನಿವೃತ್ತ ಪ್ರಾಧ್ಯಾಪಕ ಡಾ. ಕಮಲಾಕ್ಷ ಕೆ, ವಿಭಾಗದ ಮುಖ್ಯಸ್ಥೆ ಸುಜಾತಾ ಎಸ್ ಹಾಗೂ ಸ್ನೇಹರಂಗದ ಅಧ್ಯಕ್ಷ ವಿವೇಕ್ ಅವರು ಅರ್ತಿಕಜೆಯವರ ಬದುಕು ಮತ್ತು ಸಾಹಿತ್ಯದ ಕುರಿತು ಮಾತನಾಡಿದರು. ಕನ್ನಡ ವಿಬಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries