HEALTH TIPS

ಆರೋಪಿಗೆ ಬಿಷ್ಣೋಯಿ ಸಹಚರನೊಂದಿಗೆ ನಂಟು, ನೇಪಾಳಕ್ಕೆ ಪರಾರಿಯಾಗಲು ಯತ್ನ: ಪೊಲೀಸ್

ಜೈಪುರ:  ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಲ್ಲಿ ಮೂವರು ಶಂಕಿತರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುಣೆ-ಜೈಪುರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತೇಜಸ್ವಿನಿ ಗೌತಮ್, 'ಭಾನುವಾರ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸಹಚರ ಎನ್ನಲಾದ ಅನಿಲ್ ಪಂಡಿತ್ ಎಂಬಾತನೊಂದಿಗೆ ಬಂಧಿತರ ಪೈಕಿ ಓರ್ವ ನಿರಂತರ ಸಂಪರ್ಕದಲ್ಲಿದ್ದ' ಎಂದು ಮಾಹಿತಿ ನೀಡಿದ್ದಾರೆ.

ಕೋಟಾ ನಗರ ಪೊಲೀಸರು ನಡೆಸಿದ 15 ನಿಮಿಷಗಳ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಬಾಲಕ ಸೇರಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನೇಪಾಳಕ್ಕೆ ಪರಾರಿಯಾಗಲು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಿಹಾರದ ಬೇಗುಸರಾಯ್ ಮೂಲದ ರಿತಿಕ್ ಅಲಿಯಾಸ್ ರೋಷನ್ ಮತ್ತು ಹರಿಯಾಣದ ಸೋನಿಪತ್ ಮೂಲದ ರೆಹಾನ್ ಎಂದು ಗುರುತಿಸಲಾಗಿದೆ. ಮೂರನೇ ಆರೋಪಿ ಬಾಲಕನಾಗಿದ್ದಾನೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ರೆಹಾನ್, ಅನಿಲ್ ಪಂಡಿತ್ ಜೊತೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ ಎಂದು ಎಸ್‌ಪಿ ಗೌತಮ್ ತಿಳಿಸಿದ್ದಾರೆ.

ವಿಧಿವಿಜ್ಞಾನ ತಂಡದ ಪರಿಶೀಲನೆ

ರೈಲಿನಲ್ಲಿ ಸಿಕ್ಕಿಬಿದ್ದ ಆರೋಪಿಗಳು:

ಆರೋಪಿಗಳು ಪ್ರಯಾಣಿಸುತ್ತಿದ್ದ ಪುಣೆ-ಜೈಪುರ ರೈಲು ಬೆಳಿಗ್ಗೆ 10.17ಕ್ಕೆ ಕೋಟಾ ನಿಲ್ದಾಣ ತಲುಪಿತ್ತು. ಮುಂಬೈ ಪೊಲೀಸರು ನೀಡಿದ ಖಚಿತ ಮಾಹಿತಿಯ ಮೇರೆಗೆ ಎಸ್‌ಪಿ ತೇಜಸ್ವಿನಿ ಗೌತಮ್ ತಕ್ಷಣವೇ ಜಾಗೃತಗೊಂಡು, ಪ್ರತ್ಯೇಕ ತಂಡಗಳನ್ನು ರಚಿಸಿದ್ದರು. ರೈಲಿನಲ್ಲಿ ತೀವ್ರ ಶೋಧ ನಡೆಸಿದಾಗ ಜನರಲ್ ಕೋಚ್‌ನಲ್ಲಿ ಕುಳಿತಿದ್ದ ಮೂವರು ಶಂಕಿತರು ಸಿಕ್ಕಿಬಿದ್ದಿದ್ದಾರೆ.

'ಕಾರ್ಯಾಚರಣೆಯಲ್ಲಿ ಗ್ಯಾಂಗ್‌ಸ್ಟರ್ ನಿಗ್ರಹ ಕಾರ್ಯಪಡೆ (ಎಜಿಟಿಎಫ್) ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಕೂಡ ನೆರವಾಗಿದ್ದಾರೆ. ಶಂಕಿತರನ್ನು ಎಸ್‌ಪಿ ಕಚೇರಿಗೆ ಕರೆತಂದು ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ. ಕೃತ್ಯ ಎಸಗಿದ ಬಳಿಕ ರೈಲು ಹತ್ತಿದ್ದ ಆರೋಪಿಗಳು, ಜೈಪುರದಿಂದ ಬಸ್ ಮೂಲಕ ದೆಹಲಿಗೆ ತೆರಳಿ, ಅಲ್ಲಿಂದ ಗಡಿ ದಾಟಿ ನೇಪಾಳಕ್ಕೆ ಪರಾರಿಯಾಗಲು ಯೋಜಿಸಿದ್ದರು. ಆರೋಪಿಗಳಿಂದ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ' ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

'ಮುಂಬೈ ಪೊಲೀಸರ ತಂಡ ಈಗಾಗಲೇ ಕೋಟಾ ತಲುಪಿದ್ದು, ಶಂಕಿತರನ್ನು ಅವರಿಗೆ ಹಸ್ತಾಂತರಿಸಲಾಗುವುದು. ಮುಂಬೈ ಪೊಲೀಸರು ತಮ್ಮ ವಶಕ್ಕೆ ಪಡೆದ ಬಳಿಕ ಇವರನ್ನು ಅಧಿಕೃತವಾಗಿ ಬಂಧಿಸಲಿದ್ದಾರೆ' ಎಂದು ಗೌತಮ್ ತಿಳಿಸಿದ್ದಾರೆ.

ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಟೈಗರ್‌ ಶ್ರಾಫ್‌ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾತ್ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries