HEALTH TIPS

ಸೇವಾ ಸಂಕಲ್ಪ ಅಭಿಯಾನ; ಪೆರಡಾಲ ಉನ್ನತಿಗೆ ಬಿಜೆಪಿ ನಾಯಕರ ಭೇಟಿ

ಬದಿಯಡ್ಕ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತ ಸೇವೆಯ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬದಿಯಡ್ಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೆರಡಾಲ ಉನ್ನತಿಗೆ ಬಿಜೆಪಿ ನಾಯಕರು ಭೇಟಿ ನೀಡಿದರು. 


ಉನ್ನತಿಯಲ್ಲಿ ನಡೆಯುತ್ತಿರುವ ಸಾಂಪ್ರದಾಯಿಕ ಸ್ವಯಂ ಉದ್ಯೋಗ ಚಟುವಟಿಕೆಗಳ ಭಾಗವಾಗಿ ಚಾಪೆ, ಬುಟ್ಟಿ, ಕೂಡು, ತಿಡುಪ್ಪು ಮುಂತಾದ ಸ್ಥಳೀಯ ಉತ್ಪನ್ನಗಳನ್ನು ತಯಾರಿಸುವ ಕಾರ್ಮಿಕರನ್ನು ನೇರವಾಗಿ ಭೇಟಿ ಮಾಡಿ, ಅವರ ಕೆಲಸ ಹಾಗೂ ಜೀವನೋಪಾಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಉನ್ನತಿಯ ಜನರ ಪ್ರಮುಖ ಜೀವನೋಪಾಯವಾಗಿರುವ ಸ್ಥಳೀಯ ಉತ್ಪನ್ನಗಳು ಹಾಗೂ ಸಾಂಪ್ರದಾಯಿಕ ಉದ್ಯೋಗಗಳನ್ನು ಪ್ರೋತ್ಸಾಹಿಸುವ ವೋಕಲ್ ಫಾರ್ ಲೋಕಲ್ ಪರಿಕಲ್ಪನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಭೇಟಿ ನಡೆಯಿತು.

ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಉನ್ನತಿಯ ವಿವಿಧ ಕುಟುಂಬಗಳನ್ನೂ ನೇರವಾಗಿ ಭೇಟಿ ಮಾಡಿ, ಅವರ ಅನುಭವಗಳು, ಸಮಸ್ಯೆಗಳು ಹಾಗೂ ಅಗತ್ಯಗಳನ್ನು ಆಲಿಸಲಾಯಿತು. ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಶಂಕರ, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಜಿಲ್ಲಾ ಸೆಲ್ ಕೋ-ಆರ್ಡಿನೇಟರ್ ಸುಕುಮಾರ್ ಕುದ್ರೆಪ್ಪಾಡಿ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್. ನಾಯಕ್, ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಬೆಳ್ಳೂರು, ಕ್ಷೇಮಕಾರ್ಯ ಸ್ಥಾಯಿಸಮಿತಿ ಅಧ್ಯಕ್ಷೆ ರಜನಿ ಸಂದೀಪ್, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಜನಪ್ರತಿನಿಧಿಗಳಾದ ಮಧುಸೂದನ ಕಂಗಿಲ, ಉಷಾ ಪಳ್ಳತ್ತಡ್ಕ, ಬಿಜೆಪಿ ಬದಿಯಡ್ಕ ಪಂಚಾಯಿತಿ ಸಮಿತಿ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ, ನವೀನಾಕ್ಷ ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries