HEALTH TIPS

ಪಶ್ಚಿಮ ಏಷ್ಯಾದ ಪರಿಸ್ಥಿತಿಗೆ ವಿಷಾದ ವ್ಯಕ್ತಪಡಿಸಿದ ಜೈಶಂಕರ್

ಮುಂಬೈ/ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಶಾಂತಿ ಮರು ಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕ ಪ್ರಯತ್ನಗಳ ಮೂಲಕ ಕೈಗೊಳ್ಳುವ ಎಲ್ಲ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದ್ದಾರೆ.

ಯುಎಇಯ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಯುಎಇಯ ಉಪಪ್ರಧಾನಿಯೂ ಆಗಿರುವ ಅಲ್ ನಹ್ಯಾನ್ ಅವರು ಸೋಮವಾರ ರಾತ್ರಿ ಮುಂಬೈಗೆ ಆಗಮಿಸಿದ್ದು, ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.

ಸೌದಿ ಅರೇಬಿಯಾದ ಮೇಲೆ ಹೂತಿ ಬಂಡುಕೋರರು ಹೊಸದಾಗಿ ದಾಳಿ ನಡೆಸಿದ್ದಾರೆ ಎಂಬ ವರದಿಗಳ ನಡುವೆ ಅವರ ಭಾರತ ಭೇಟಿ ನಡೆದಿದೆ.

ಸಭೆಯಲ್ಲಿ ಮಾತನಾಡಿದ ಜೈಶಂಕರ್, ಭಾರತ-ಯುಎಇ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವು(ಸಿಇಪಿಎ) ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳನ್ನು ಗಣನೀಯವಾಗಿ ಬಲಪಡಿಸಿದೆ ಎಂದು ಹೇಳಿದ್ದಾರೆ.

ಮುಂದುವರಿದು, 'ಕೊಲ್ಲಿ ರಾಷ್ಟ್ರಗಳ ಪರಿಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಶಾಂತಿ ಮರು ಸ್ಥಾಪಿಸುವ ಎಲ್ಲ ಪ್ರಯತ್ನಗಳಿಗೆ ನಮ್ಮ ಬೆಂಬಲವಿದೆ' ಎಂದು ಭರವಸೆ ನೀಡಿದ್ದಾರೆ.

'ವ್ಯಾಪಾರ, ಇಂಧನ ಮತ್ತು ರಸಗೊಬ್ಬರಗಳ ಸಾಗಣೆಯು ಮುಕ್ತವಾಗಿ, ಸುರಕ್ಷಿತವಾಗಿ ಮತ್ತು ಯಾವುದೇ ಅಡೆತಡೆಯಿಲ್ಲದೆ ನಡೆಯುವುದನ್ನು ನಾವು ಬೆಂಬಲಿಸುತ್ತೇವೆ. ಯುಎಇಯಲ್ಲಿರುವ ಭಾರತೀಯ ಸಮುದಾಯದ ಯೋಗಕ್ಷೇಮವನ್ನು ಖಚಿತಪಡಿಸುತ್ತಿರುವುದಕ್ಕಾಗಿ ನಿಮಗೆ ಮತ್ತು ನಿಮ್ಮ ಮೂಲಕ ಯುಎಇ ನಾಯಕತ್ವಕ್ಕೆ ನಾನು ಧನ್ಯವಾದಗಳನ್ನು ಸಲ್ಲಿಸಲು ಬಯಸುತ್ತೇನೆ' ಎಂದಿದ್ದಾರೆ.

'ಸಿಇಪಿಎ ಒಪ್ಪಂದಕ್ಕೆ ಸಹಿ ಹಾಕಿದ ನಂತರ ದ್ವಿಪಕ್ಷೀಯ ವ್ಯಾಪಾರವು 100 ಶತಕೋಟಿ ಅಮೆರಿಕನ್ ಡಾಲರ್‌ಗಳ ಗಡಿಯನ್ನು ದಾಟಿದೆ. ಎರಡೂ ದೇಶಗಳ ನಡುವಿನ ಹೂಡಿಕೆಗಳು ನಿರಂತರವಾಗಿ ಹೆಚ್ಚುತ್ತಿವೆ. ಇದು ಪರಸ್ಪರರ ಆರ್ಥಿಕತೆಗಳ ಮೇಲೆ ನಮ್ಮ ಉದ್ಯಮಗಳು ಹೊಂದಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ' ಎಂದು ಜೈಶಂಕರ್ ತಿಳಿಸಿದ್ದಾರೆ.

2022ರಲ್ಲಿ ಉಭಯ ದೇಶಗಳು ಸಿಇಪಿಎ ಒಪ್ಪಂದಕ್ಕೆ ಸಹಿ ಹಾಕಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries