ಕಾಸರಗೋಡು: ಮಹಾರಾಷ್ಟ್ರದ ಪುಣೆಯಲ್ಲಿ 2026ರ ಅಕ್ಟೋಬರ್ 27ರಿಂದ ನವೆಂಬರ್ 3ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕೇರಳ ತಂಡದ ವ್ಯವಸ್ಥಾಪಕರಾಗಿ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ನೀಲೇಶ್ವರ ನಿವಾಸಿಯಾಗಿರುವ ದಿನೇಶ್ ಕುಮಾರ್ ಅವರು ಚೆಮ್ಮನಾಡ್ ಜಮಾ-ಅತ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಕೇರಳ ತಂಡದ ವ್ಯವಸ್ಥಾಪಕರಾಗಿ ಆಯ್ಕೆಯಾಗಿರುವುದು ಕಾಸರಗೋಡು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.


