ಟೈರ್ ಸ್ಫೋಟಗೊಂಡು ಕಾರಿನ ನಿಯಂತ್ರಣ ತಪ್ಪಿ ಅಪಘಾತ; ಹಿಂಬದಿಯಿಂದ ಬಂದ ಮತ್ತೆರಡು ಕಾರುಗಳೂ ಡಿಕ್ಕಿ
ಮಲಪ್ಪುರಂ: ಶಾಸಕ ಸಂದೀಪ್ ವಾರಿಯರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಶಾಸಕರು ಸೇರಿದಂತೆ ಎಲ್ಲ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಮಲಪ್ಪುರಂ ಜಿಲ್ಲೆಯ ಕೋಯಿಚ್ಚನದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಂಜಾನೆ ಈ ಘಟನೆ ನಡೆದಿದೆ.
ಕಾರಿನ ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ವಾಹನದ ನಿಯಂತ್ರಣ ತಪ್ಪಿತ್ತು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೆರಡು ಕಾರುಗಳು ಕೂಡ ಅಪಘಾತಕ್ಕೀಡಾದ ವಾಹನಕ್ಕೆ ಡಿಕ್ಕಿ ಹೊಡೆದಿವೆ.
ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


