ಕಾಸರಗೋಡು: ಉಳಿಯತಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ವಿಶೇಷ ವಿಕಲಚೇತನ ಶಾಲೆಯಲ್ಲಿ ಮಕ್ಕಳೊಂದಿಗೆ ವಿಶ್ವ ಆಹಾರ ದಿನವನ್ನು ಆಚರಿಸಲಾಯಿತು. ಮಕ್ಕಳಲ್ಲಿ ಹಸಿವು, ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾನಗರ ಪೋಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ವಿಜಯನ್ ಮೇಲೋತ್ ಅವರು, ಆರೋಗ್ಯಕರ ಆಹಾರ ಸೇವನೆಯ ಮಹತ್ವ ಹಾಗೂ ಆಹಾರ ಪೆÇೀಲಾಗದಂತೆ ತಡೆಯಲು ಪ್ರತಿಯೊಬ್ಬರೂ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ವಿವರಿಸಿದರು.
ಪ್ರಗತಿ ಶಾಲೆಯ ಉಪಾಧ್ಯಕ್ಷ ಅಶೋಕ ರೈ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಉದಯಕುಮಾರ್ ಎಂ., ಪ್ರಜಿಶ್, ಸಿದ್ದೀಕ್ ಎಸ್.ಎಸ್. ಹಾಗೂ ಅಶ್ವತಿ ಅವರು ಶುಭ ಹಾರೈಸಿದರು. ಶಿಕ್ಷಕಿ ಭವ್ಯಶ್ರೀ ಸ್ವಾಗತಿಸಿ, ಚಿತ್ರಾ ವಂದಿಸಿದರು.

.jpg)
.jpg)
