ಶ್ರೀವಿಜಯಪುರಂ: ಅಂಡಮಾನ್ ಸಮುದ್ರದಲ್ಲಿ ಗುರುವಾರ ಭೂಕಂಪವಾಗಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗಗಳಲ್ಲಿ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಇತ್ತು ಎಂದು ರಾಷ್ಟ್ರೀಯ ಭೂಕಂಪನ ವೀಕ್ಷಣ ಕೇಂದ್ರ ತಿಳಿಸಿದೆ.
ಉತ್ತರ ಪಶ್ಚಿಮ ವಲಯದ ಬಾಂಬೂ ಫ್ಲ್ಯಾಟ್ ಪ್ರದೇಶದಲ್ಲಿ ಮಧ್ಯಾಹ್ನ 3.19ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಯಿತು. ಆಸ್ತಿಗಳಿಗೆ ಎಷ್ಟು ಹಾನಿಯಾಗಿದೆ ಎಂಬ ಕುರಿತು ತಕ್ಷಣಕ್ಕೆ ಯಾವ ಮಾಹಿತಿಯೂ ಲಭ್ಯವಿಲ್ಲ. ಕೆಲವು ತಂಡಗಳು ಪ್ರಾದೇಶಿಕ ಚಟುವಟಿಕೆಗಳನ್ನು ಪರಿಶೀಲನೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಮುನ್ನೆಚ್ಚರಿಕಾ ಕ್ರಮವಾಗಿ, ಪ್ರವಾಸಿಗರಿಗೆ ಮತ್ತು ಮೀನುಗಾರರಿಗೆ ಸಮುದ್ರದಲ್ಲಿ ಇಳಿಯುವ ಸಾಹಸ ಮಾಡಬೇಡಿ ಎಂದು ಎಚ್ಚರಿಸಿದೆ.



