ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿವಿಜಯ ಪ್ರೌಢಶಾಲೆಯಲ್ಲಿ ಗಾಂಧಿಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನ್ ಅವರು ಗಾಂಧೀಜಿಯರ ಜೀವನ, ಸತ್ಯ ಮತ್ತು ಅಹಿಂಸೆಯ ತತ್ವದ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶ ತಮ್ಮ ಜೀವನದಲ್ಲಿ ಅಳವಡಿಸಿಕೊಲ್ಳುವಂತೆ ಕಿವಿಮಾತುಹೇಳಿದರು. ಸ್ಕೌ ಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಹಾಡಿದರು. ಈ ಸಂದರ್ಭ ಕುಬಣೂರು ಎಸ್ಆರ್ ಎಯುಪಿ ಶಾಲೆಯಲ್ಲಿ ಭಾಗವಹಿಸಿದ ಸ್ಕೌಟ್ ಮತ್ತು ಗೈ ಡ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಪಿ. ಟಿ. ಎ ಅಧ್ಯಕ್ಷ ಮೋಹನ್ ವಿತರಿಸಿದರು. ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕೃಷ್ಣವೇಣಿ ಸ್ಟಾಗತಿಸಿದರು. ಪ್ರತಿಭಾ ವಂದಿಸಿದರು. ಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


