ಕಾಸರಗೋಡು: ಬಿಜೆಪಿ ಕಾಸರಗೋಡು ನಗರಸಭಾ ಸಮಿತಿಯ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪ್ಲಸ್ಟು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ‘ವಿದ್ಯಾಕಮಲ ಪ್ರಶಸ್ತಿ’ ಕಾರ್ಯಕ್ರಮ ಆಯೋಜಿಸಲಾಯಿತು.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ನಡೆದ ಸಮಾರಂಭವನ್ನು ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಪಿ. ರಮೇಶ್ ಉದ್ಘಾಟಿಸಿದರು.
ಬಿಜೆಪಿ ಪೂರ್ವ ವಲಯದ ಅಧ್ಯಕ್ಷ ವರಪ್ರಸಾದ್ ಕೋಟೆಕಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೆ. ಸವಿತಾ ಟೀಚರ್, ಗುರುಪ್ರಸಾದ್ ಪ್ರಭು, ರವೀಂದ್ರ ಪೂಜಾರಿ, ಕೆ. ಚೇತನ್ ಹಾಗೂ ಕೆ.ಆರ್. ಹರೀಶ್ ಉಪಸ್ಥಿತರಿದ್ದರು.
ಬಿಜೆಪಿ ಪೂರ್ವ ಘಟಕದ ಪ್ರಧಾನ ಕಾರ್ಯದರ್ಶಿ ಕೆ. ರಾಮಮೋಹನ್ ಸ್ವಾಗತಿಸಿದರು.

