ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತಿ ಪಶುವೈದ್ಯಕೀಯ ಆಸ್ಪತ್ರೆಯ ನೇತೃತ್ವದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ ನೀಡುವ ಅಭಿಯಾನ ಅಕ್ಟೋಬರ್ 27 ರವರೆಗೆ ನಡೆಯಲಿದೆ.
ಪಂಚಾಯತಿಯ ವಿವಿಧ ವಾರ್ಡ್ಗಳಲ್ಲಿ ಈಗಾಗಲೇ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗಿದೆ. ಗುರುವಾರ ವಿದ್ಯಾಗಿರಿ ವಾರ್ಡ್ನ ವಿವಿಧ ಪ್ರದೇಶಗಳಲ್ಲಿ ಸಾಕು ನಾಯಿಗಳಿಗೆ ಲಸಿಕೆ ನೀಡಲಾಯಿತು.
ವಾರ್ಡ್ ಸದಸ್ಯ ಬಾಲಕೃಷ್ಣ ಶೆಟ್ಟಿ ಕೆ. ಅವರ ನೇತೃತ್ವದಲ್ಲಿ ನಡೆದ ಶಿಬಿರಕ್ಕೆ ಪಶುವೈದ್ಯಕೀಯ ಆಸ್ಪತ್ರೆಯ ಅರ್ಚನಾ ಸಹಕರಿಸಿದರು.
ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸುವುದು ಕಡ್ಡಾಯವಾಗಿದ್ದು, ನಾಯಿ ಮಾಲೀಕರು ಈ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

.jpg)
