HEALTH TIPS

ಮಹಿಳೆಯರ ವಿರುದ್ಧ ಅಪರಾಧ ಎಸಗುವ ಗೂಂಡಾಗಳಲ್ಲಿ ಕಾನೂನಿನ ಭಯ ಹುಟ್ಟಿಸಿ: 'ಸುಪ್ರೀಂ'

ನವದೆಹಲಿ: 'ಮಹಿಳೆಯರ ವಿರುದ್ಧ ಅಪರಾಧ ಕೃತ್ಯ ಎಸಗುವ ಗೂಂಡಾಗಳಲ್ಲಿ ಕಾನೂನಿನ ಭಯ ಹುಟ್ಟಿಸುವ ತುರ್ತು ಅಗತ್ಯವಿದೆ' ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. 


ಅಲ್ಲದೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಿರುವ ಕುರಿತು ಕಳವಳ ವ್ಯಕ್ತಪಡಿಸಿದೆ. 

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

'ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ರಾತ್ರಿ 11 ಗಂಟೆಯಾದರೂ ಮಹಿಳೆಯರು ರಸ್ತೆಯಲ್ಲಾಗಲಿ, ಮೆಟ್ರೊದಲ್ಲಾಗಲಿ ಯಾವುದೇ ಭಯವಿಲ್ಲದೆ ಸಂಚರಿಸಲು ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು' ಎಂದು ಪೀಠವು ತಿಳಿಸಿದೆ.

'ಅಪರಾಧ ನಡೆದ ಬಳಿಕ ಕೈಗೊಳ್ಳುವ ಕ್ರಮಗಳಿಗಿಂತ, ಅಪರಾಧ ನಡೆಯದಂತೆ ತಡೆಯುವುದೇ ಅತ್ಯಂತ ಮುಖ್ಯ. ಇಂತಹ ಕೃತ್ಯಗಳಲ್ಲಿ ತೊಡಗುವ ಸಮಾಜಘಾತುಕ ಶಕ್ತಿಗಳು ಹಾಗೂ ಪುಂಡರಲ್ಲಿ ಪೊಲೀಸರು ನಡುಕ ಹುಟ್ಟಿಸಬೇಕಿದೆ' ಎಂದಿದೆ.

ದೆಹಲಿ-ಎನ್‌ಸಿಆರ್ ಭಾಗದಲ್ಲಿ ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತ ಮಾಧ್ಯಮ ವರದಿಗಳನ್ನು ಆಧರಿಸಿ, ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ಇಂತಹ ಘಟನೆಗಳು ಕಾನೂನು ಜಾರಿ ಸಂಸ್ಥೆಗಳ ವ್ಯವಸ್ಥಿತ ವೈಫಲ್ಯವನ್ನು ಎತ್ತಿ ತೋರಿಸುತ್ತವೆ ಎಂದು ನ್ಯಾಯಾಲಯ ಈ ಹಿಂದೆ ಎಚ್ಚರಿಸಿತ್ತು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries