ಬದಿಯಡ್ಕ: ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬದಿಯಡ್ಕ ಗ್ರಾಮ ಪಂಚಾಯಿತಿಯ ನೀರ್ಚಾಲು ಮೂರನೇ ವಾರ್ಡ್ನ ಆಶಾ ಕಾರ್ಯಕರ್ತೆ ದೇವಕಿ ಅಣಬೈಲು ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ಬಿಜೆಪಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಪಿ.ಆರ್. ಅವರು ಅಭಿನಂದನಾ ನುಡಿಗಳನ್ನಾಡಿ, ವಾರ್ಡ್ನಾದ್ಯಂತ ಸಂಚರಿಸಿ ಜನರೊಂದಿಗೆ ನೇರ ಸಂಪರ್ಕ ಹೊಂದಿರುವ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಸಂಕಲ್ಪದೊಂದಿಗೆ ಪಕ್ಷವು ಕಾರ್ಯಕರ್ತರನ್ನು ಒಳಗೊಳ್ಳಿಸಿಕೊಂಡು ವಿವಿಧ ಸೇವಾ ಕಾರ್ಯಕ್ರಮಗಳನ್ನು ಮುಂದುವರಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬದಿಯಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಬ್ಲಾಕ್ ಪಂಚಾಯಿತಿ ಸದಸ್ಯ ಮಹೇಶ್ ವಳಕುಂಜ, ವಾರ್ಡ್ ಸದಸ್ಯ ಶ್ಯಾಮಪ್ರಸಾದ್ ಸರಳಿ ಹಾಗೂ ಹರಿಹರ ಬಾಲಗೋಕುಲದ ಅಧ್ಯಾಪಕಿ ಪ್ರೇಮಲತಾ ಕೆ. ಉಪಸ್ಥಿತರಿದ್ದರು.

.jpg)
.jpg)
