HEALTH TIPS

ಕನ್ನಡ ಮಾಧ್ಯಮದ ಬಲವರ್ಧನೆಗೆ ಸಂಘಟಿತ ಪ್ರಯತ್ನ ಅಗತ್ಯ: ಕಡಂಬಾರಿನಲ್ಲಿ ಅಧ್ಯಾಪಕರ ಸಂಘದ ಸಮ್ಮೇಳನ

ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟನೆ; ಕನ್ನಡ ಸಾಹಿತ್ಯ ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಣೆ

ಮಂಜೇಶ್ವರ: ಕನ್ನಡ ಮಾಧ್ಯಮದ ಬಲವರ್ಧನೆ ಹಾಗೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಸಂಘಟಿತ ಪ್ರಯತ್ನ ಅಗತ್ಯ ಎಂಬ ಆಶಯದೊಂದಿಗೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ ಮತ್ತು ಸಮ್ಮೇಳನ ಕಡಂಬಾರು ಸರ್ಕಾರಿ ಪ್ರೌಢಶಾಲೆಯ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಿತು.


ಉಪಜಿಲ್ಲಾ ಅಧ್ಯಕ್ಷ ಅಶೋಕ್ ಕೊಡ್ಲಮೊಗರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ಪ್ರತಿನಿಧಿ ಸಮ್ಮೇಳನದಲ್ಲಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಕಿಶೋರ್ ಕುಮಾರ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ನಡೆಯಿತು. ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ್ ಹಾಗೂ ಸಂಘಟನಾ ಕಾರ್ಯದರ್ಶಿ ಜಬ್ಬಾರ್ ಉತ್ತರಿಸಿದರು.

ನಂತರ ನಡೆದ ಉಪಜಿಲ್ಲಾ ಸಮ್ಮೇಳನವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಉಪಜಿಲ್ಲಾ ಅಧ್ಯಕ್ಷ ಅಶೋಕ್ ಕೊಡ್ಲಮೊಗರು ಅಧ್ಯಕ್ಷತೆ ವಹಿಸಿದ್ದರು.

ಸಂಶೋಧನಾ ಪ್ರಾಧ್ಯಾಪಕ ರಾಜೇಶ್ ಬೆಜ್ಜಂಗಳ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ನಾರಾಯಣ ದೇಲಂಪಾಡಿ, ಕನ್ನಡ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ಸದಸ್ಯೆ ಪದ್ಮಾವತಿ ಐಲ, ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ್, ಶಾಲಾ ಮುಖ್ಯಶಿಕ್ಷಕ ಹರೀಶ್ ಕುಮಾರ್ ಹಾಗೂ ಪಿಟಿಎ ಅಧ್ಯಕ್ಷ ಬಶೀರ್ ಕನಿಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ರಸಪ್ರಶ್ನೆ ವಿಜೇತರಿಗೆ ಬಹುಮಾನ

ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಮಹತ್ವ ಪಡೆದಿವೆ.

ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಸ್ವಾಗತಿಸಿದರು. ನಿಶಿತ್ ಐಲ ವಂದಿಸಿದರು. ದಿವಾಕರ ಬಳ್ಳಾಲ್ ಮತ್ತು ಚಂದ್ರಿಕಾ ಟೀಚರ್ ಕಾರ್ಯಕ್ರಮ ನಿರೂಪಿಸಿದರು.

ಪ್ರತಿನಿಧಿ ಸಮ್ಮೇಳನದಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷ ಉಮೇಶ್ ಬಿ., ಜಂಟಿ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಹಾಗೂ ಉಪಜಿಲ್ಲಾ ಉಪಾಧ್ಯಕ್ಷರಾದ ಶಿವರಾಮ್ ಭಟ್ ಮತ್ತು ಶಂಕರನಾರಾಯಣ ಭಟ್ ಉಪಸ್ಥಿತರಿದ್ದರು.





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries