HEALTH TIPS

ಬೆಳ್ಳೂರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಇಂದು ಚಂಡಿಕಾ ಹೋಮ: ಎಡನೀರು ಶ್ರೀಗಳ ಉಪಸ್ಥಿತಿ

ಮುಳ್ಳೇರಿಯ: ಬೆಳ್ಳೂರಿನ ಪ್ರಸಿದ್ಧ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗುತ್ತಿದ್ದು, ಇಂದು(ಅಕ್ಟೋಬರ್ 16)  ಕ್ಷೇತ್ರದಲ್ಲಿ ಚಂಡಿಕಾ ಹೋಮ ಸಂಪನ್ನಗೊಳ್ಳಲಿದೆ.


ಬೆಳಗ್ಗೆ 7 ಗಂಟೆಗೆ ಸಂಕಲ್ಪ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರ ನೇತೃತ್ವದಲ್ಲಿ ಚಂಡಿಕಾ ಹೋಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಕ್ಷೇತ್ರಕ್ಕೆ ಆಗಮಿಸಲಿದ್ದು, ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗುವುದು. ಬಳಿಕ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಂತ್ರಾಕ್ಷತೆ ಪ್ರಸಾದ ವಿತರಿಸಲಿದ್ದಾರೆ.

ಬೆಳಗ್ಗೆ 11:30ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ನೆರವೇರಲಿದ್ದು, ನಂತರ ಮಹಾಪೂಜೆ ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಆಯುಧ ಪೂಜೆ ಮತ್ತು ವಿದ್ಯಾರಂಭ:

ನವರಾತ್ರಿ ಉತ್ಸವದ ಅಂಗವಾಗಿ ಅಕ್ಟೋಬರ್ 20 ರಂದು ಬೆಳಗ್ಗೆ 7ಕ್ಕೆ ಆಯುಧ ಪೂಜೆ ನೆರವೇರಲಿದೆ. ಅಕ್ಟೋಬರ್ 21 ರಂದು ಬೆಳಗ್ಗೆ 9ಕ್ಕೆ ವಿದ್ಯಾರಂಭ (ಅಕ್ಷರಾಭ್ಯಾಸ) ಕಾರ್ಯಕ್ರಮ ಜರುಗಲಿದೆ.

ಉತ್ಸವದ ಪ್ರಯುಕ್ತ ಕ್ಷೇತ್ರದಲ್ಲಿ ನಿತ್ಯವೂ ಬೆಳಗ್ಗೆ 6 ಗಂಟೆಯಿಂದ ರಾತ್ರಿಯ ಮಹಾಪೂಜೆಯ ತನಕ ವಿವಿಧ ಭಜನಾ ಮಂಡಳಿಗಳಿಂದ ನಿರಂತರ ಭಜನಾ ಸೇವೆ, ದುರ್ಗಾಪೂಜೆ ಹಾಗೂ ವಿಶೇಷ ಅಲಂಕಾರ ಪೂಜೆಗಳು ನೆರವೇರುತ್ತಿವೆ. ಪ್ರತಿದಿನ ನಿತ್ಯ ಪೂಜೆಯ ಬಳಿಕ ವಾಹನ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries