HEALTH TIPS

ಸೌದಿ ವಿಮಾನ ನಿಲ್ದಾಣದ ಮೇಲೆ ಹೂಥಿ ದಾಳಿ: ಭಾರತೀಯನ ಸಾವು

ದುಬೈ: ಸೌದಿ ಅರೇಬಿಯಾದ ಡಮ್ಮಮ್ ವಿಮಾನ ನಿಲ್ದಾಣದ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಶಾಯ್‌ಬಾಹ್ ತೈಲಾಗಾರದ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಸೌದಿಯ ಪ್ರಜೆಯೊಬ್ಬರು ಗಾಯಗೊಂಡಿದ್ದರು. 


ಸೌದಿ ಅರೇಬಿಯಾದ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಯೆಮನ್‌ನ ಹೂಥಿ ಬಂಡುಕೋರರು ನಿರಂತರ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೌದಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

'ಕಳೆದ ರಾತ್ರಿ ಡಮ್ಮಮ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಓರ್ವ ಭಾರತೀಯ ಸೇರಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಭಾರತ ಮೂಲದ ಮತ್ತಿಬ್ಬರಿಗೆ ಗಾಯಗಳಾಗಿವೆ' ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಮೃತರ ಸಂಬಂಧಿಕರನ್ನು ಸಂಪರ್ಕಿಸಲು ಯತ್ನಿಸಲಾಗುತ್ತಿದೆ. ಮೃತರ ಕುಟುಂಬಕ್ಕೆ ಸಂತಾಪಗಳು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುವುದಾಗಿ ಹೇಳಿದೆ.

ಇರಾನ್ ಬೆಂಬಲಿತ ಹೂಥಿ ಬಂಡುಕೋರರು ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು, ತೈಲಾಗಾರಗಳು ಮತ್ತು ಮೂಲಸೌಕರ್ಯಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸುತ್ತಿದ್ದಾರೆ.

ಡಮ್ಮಮ್ ವಿಮಾನ ನಿಲ್ದಾಣದ ಮೇಲಿನ ದಾಳಿ ನಡೆಸಿದವರು ಯಾರು ಎಂಬುದನ್ನು ಸೌದಿ ಅಧಿಕಾರಿಗಳು ದೃಢಪಡಿಸಿಲ್ಲ. ಗಾಯಾಳುಗಳ ಚೇತರಿಕೆಗೆ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ರಾಯಭಾರ ಕಚೇರಿ ತಿಳಿಸಿದೆ.

ಸೌದಿ ಅರೇಬಿಯಾ ಮೇಲೆ ದಾಳಿ, ಅದರಲ್ಲೂ ಜನನಿಬಿಡ ಕೇಂದ್ರಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಭಾರತವು, ಕೂಡಲೇ ಯುದ್ಧ ವಿರಾಮ ಘೋಷಿಸುವಂತೆ ಒತ್ತಾಯಿಸಿದೆ.

ಜಾಗ್ರತೆಯಿಂದ ಇರುವಂತೆ ಸೌದಿಯಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ. ಅಧಿಕಾರಿಗಳ ಸಲಹೆ ಪಾಲಿಸುವ ಜೊತೆಗೆ ಹೊರಗಡೆ ಓಡಾಡುವುದನ್ನು ಆದಷ್ಟು ತಪ್ಪಿಸುವಂತೆ ತಿಳಿಸಿದೆ.

ಡ್ರೋನ್ ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸುತ್ತಿರುವ ವಿಡಿಯೊ ಮತ್ತು ಚಿತ್ರಗಳನ್ನು ಹಂಚಿಕೊಳ್ಳದಂತೆಯೂ ಸೂಚಿಸಲಾಗಿದೆ.

ಸೌದಿ ಅರೇಬಿಯಾದಲ್ಲಿ 27.4 ಲಕ್ಷ ಭಾರತೀಯರಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries