HEALTH TIPS

ವಿಮಾನ ಪ್ರಯಾಣಿಕರನ್ನು ರಕ್ಷಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‍ರಿಗೆ ಕುಂಬಳೆಯಲ್ಲಿ ಬಿಜೆಪಿಯಿಂದ ಅಭಿನಂದನೆ

ಕುಂಬಳೆ:  ಸಂಚರಿಸುತ್ತಿದ್ದ ವಿಮಾನದಲ್ಲಿ ನಡೆದ ಉಗ್ರ ದಾಳಿಯ ಸಂದರ್ಭದಲ್ಲಿ ಸ್ವಂತ ಜೀವದಾಸೆಯನ್ನು ತೊರೆದು ಪ್ರಯಾಣಿಕರನ್ನು ದುರಂತದಿಂದ ಪಾರುಮಾಡಿದ ಭಾರತದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಸಾಹಸ ಮತ್ತು ಧೈರ್ಯವನ್ನು ಗೌರವಿಸುವ ಅಭಿನಂದನಾ ಕಾರ್ಯಕ್ರಮವನ್ನು ಬಿಜೆಪಿ ಕುಂಬಳೆ ಮಂಡಲ ವತಿಯಿಂದ ಸೋಮವಾರ ಆಯೋಜಿಸಲಾಯಿತು.  

ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್ ಉದ್ಘಾಟಿಸಿದರು. ಅವರು ಮಾತನಾಡಿ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‍ರ ಧೈರ್ಯ ಹಾಗೂ ಸಾಹಸದ ಬಗ್ಗೆ ಗುಣಗಾನ ಮಾಡಿದರು. ಸ್ಮಿತ್ ಮಚ್ಚಾರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಲಾಯಿತು.  ಕಾರ್ಯಕ್ರಮದಲ್ಲಿ ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ಬಿ. ವಿಕ್ರಂ ಪೈ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ, ಕೆ.ಪಿ. ವಲ್ಸರಾಜ್, ಪಂಚಾಯತಿ ಸಮಿತಿ ಅಧ್ಯಕ್ಷ ಸುಜಿತ್ ರೈ,  ಶಿವಪ್ರಸಾದ್ ರೈ ಮಡ್ವ, ಪಂಚಾಯತಿ ಸಮಿತಿ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಶೆಟ್ಟಿ, ಪಂಚಾಯತಿ ಸದಸ್ಯರಾದ ರಮೇಶ್ ಭಟ್, ಅಜಿತ್ ಕುಂಬಳೆ, ಕಾಂಚಾರ, ಮಂಡಲ ಉಪಾಧ್ಯಕ್ಷರಾದ ಸುಧಾಕರ ಕಾಮತ್, ಪ್ರೇಮಾವತಿ, ಕೋಶಾಧಿಕಾರಿ ರಾಧಾಕೃಷ್ಣ ರೈ, ಸದಸ್ಯೆ ವಿದ್ಯಾ ಪೈ,  ಜಿಲ್ಲಾ ಸಮಿತಿ ಸದಸ್ಯ ಬಾಬು ಕುಬಣೂರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್ ಪುಣಿಯೂರು ಸ್ವಾಗತಿಸಿ, ದಿನೇಶ್ ಮುಳಿಂಜ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries