ಬದಿಯಡ್ಕ: ಕುಂಜರಕಾನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶಿವಾರ್ಪಣಂ ಕಲಾನಿಕೇತನ, ನೀರ್ಚಾಲು ಇವರಿಂದ ಭರತನಾಟ್ಯ ಹಾಗೂ ಜಾನಪದ ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವಿದುಷಿ ಅಶ್ವಿನಿ ಕೆ.ಎಂ., ವಿದುಷಿ ಧನ್ಯಾ ರಾಘವ ಹಾಗೂ ವಿದುಷಿ ವಿಷಯಾ ಬಾಲಕೃಷ್ಣನ್ ಅವರು ತಮ್ಮ ಮನಮೋಹಕ ನೃತ್ಯ ಪ್ರದರ್ಶನದ ಮೂಲಕ ಪ್ರೇಕ್ಷಕರ ಗಮನ ಸೆಳೆದರು.
ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಸೊಬಗು ಹಾಗೂ ಜಾನಪದ ಕಲೆಯ ವೈವಿಧ್ಯತೆಯನ್ನು ಅನಾವರಣಗೊಳಿಸಿದ ಈ ನೃತ್ಯ ಕಾರ್ಯಕ್ರಮವು ನವರಾತ್ರಿ ಉತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು. ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಡೆದ ಈ ಕಾರ್ಯಕ್ರಮವು ಕಲಾಭಿಮಾನಿಗಳಿಗೆ ವಿಶೇಷ ಅನುಭವವನ್ನು ನೀಡಿತು. ಶ್ರೀ ಕ್ಷೇತ್ರದ ಪದಾಧಿಕಾರಿಗಳು ಕಲಾವಿದರನ್ನು ಅಭಿನಂದಿಸಿ ಶ್ರೀದೇವರ ಪ್ರಸಾದವನ್ನು ನೀಡಿದರು.

.jpg)
