ನವದೆಹಲಿ: ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ.
ಮಾಜಿ ಕೇಂದ್ರ ಸಚಿವ ಎಲ್. ಮುರುಗನ್ ಅವರ ರಾಜೀನಾಮೆಯಿಂದಾಗಿ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ.
ನವೆಂಬರ್ 2ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 12ರಂದು ಮತದಾನ ನಡೆಯಲಿದೆ.
ಉತ್ತರ ಪ್ರದೇಶದಿಂದ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಪುರಿ ಅವರ ಅಧಿಕಾರಾವಧಿಯು ನವೆಂಬರ್ 25ರಂದು ಕೊನೆಗೊಳ್ಳಲಿದೆ.
ಹರ್ದೀಪ್ ಸಿಂಗ್ ಅವರು 2017ರಿಂದ ಕೇಂದ್ರ ಸಂಪುಟದಲ್ಲಿದ್ದಾರೆ.


