ಕಾಸರಗೋಡು: ನರೇಂದ್ರ ಮೋದಿಯವರು ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ನಡೆಯುತ್ತಿರುವ 'ಸೇವಾ ಸಂಕಲ್ಪ ಅಭಿಯಾನ'ದ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲಾಮಟ್ಟದ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಮಾಧ್ಯಮ ಸಂಚಾಲಕ ವೈ. ಕೃಷ್ಣದಾಸ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿವ್ಯಾ ಸಂದೀಪ್, ರವೀಂದ್ರ ರೈ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಅಶ್ವಿನ್ ಕೊಲ್ಲಾಲಯಿಲ್, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಲೀಲಾವತಿ, ಮಮತಾ ಸಾಗರ್ ಮೊದಲಾದವರು ಉಪಸ್ಥಿತರಿದ್ದರು.



