HEALTH TIPS

ಎಸ್‌ಐಆರ್‌ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲು ಸಿದ್ಧ: ಅಮಿತ್ ಶಾ

ಲಖನೌ: 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಸಿದ್ದರಿದ್ದೇವೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಅಲ್ಲಿ ಈ ವಿಷಯವನ್ನು ಚರ್ಚಿಸುವಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಅಮಿತ್ ಶಾ ಸವಾಲು ಹಾಕಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಈ ವಿಚಾರದ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ನಾವು ಸಂಪೂರ್ಣ ಸಿದ್ದರಿದ್ದೇವೆ. ನಮಗೆ ಮುಚ್ಚಿಡಲು ಏನೂ ಇಲ್ಲ. ಸಂಸತ್ತಿನ ವಿಶೇಷ ಅಧಿವೇಶನ ಕರೆದು ಅಲ್ಲೇ ಚರ್ಚಿಸೋಣ' ಎಂದು ಸವಾಲು ಹಾಕಿದ್ದಾರೆ.

ಆದರೆ, ಪ್ರತಿಪಕ್ಷಗಳಿಗೆ ಸಂಸತ್ತಿನಲ್ಲಿ ಈ ವಿಚಾರದ ಬಗ್ಗೆ ಚರ್ಚಿಸುವ ಉದ್ದೇಶವಿಲ್ಲ. ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡದೆ ಗದ್ದಲ ಸೃಷ್ಟಿಸುತ್ತಿವೆ ಎಂದು ಶಾ ಆರೋಪಿಸಿದ್ದಾರೆ.

ಎಸ್‌ಐಆರ್‌ ಲೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ 'ಸಾರ್ವಜನಿಕ ವಾಗ್ದಂಡನೆ' ನಡೆಸಲು ಕಾಂಗ್ರೆಸ್‌ ಸಿದ್ಧತೆ ನಡೆಸುತ್ತಿದೆ.

ಶುಕ್ರವಾರ ನಡೆಯಬೇಕಿದ್ದ 'ಅಣುಕು ಸಂಸತ್' ಕಾರ್ಯಕ್ರಮ ಮಳೆಯಿಂದ ಮುಂದೂಡಬೇಕಾಯಿತು. ಇದೀಗ ಕಾರ್ಯಕ್ರಮವನ್ನು ಇಂದು (ಶನಿವಾರ) ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಂದರ್ಭದಲ್ಲಿ ' ವಾಗ್ದಂಡನೆ ನಿರ್ಣಯ' ಮಂಡಿಸುವ ನಿರೀಕ್ಷೆಯಿದೆ.

ಭಾನುವಾರ(ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಮುಖ್ಯ ಚುನಾವಣಾ ಆಯುಕ್ತರು ವಿರುದ್ಧ ಇಂಡಿ ಮೈತ್ರಿಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries