HEALTH TIPS

ಜಂತರ್ ಮಂತರ್‌ ಗೆ ತೆರಳುತ್ತಿದ್ದ ರಾಹುಲ್, ಪ್ರಿಯಾಂಕಾ ವಶಕ್ಕೆ

ನವದೆಹಲಿ:  ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಬುಧವಾರ ನಡೆಸಿದ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.


ಜಂತರ್ ಮಂತರ್ನಿಂದ ಬಲವಂತವಾಗಿ ತೆರವುಗೊಳಿಸಿದ ಬಳಿಕ 24 ಗಂಟೆಗಳ ಅವಧಿಯಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ಎರಡು ಬಾರಿ ವಶಕ್ಕೆ ಪಡೆಯಲಾಯಿತು.

ಮಧ್ಯ ದಿಲ್ಲಿಯ ಶಾಂಗ್ರಿ-ಲಾ ಹೋಟೆಲ್ ಬಳಿಯ ವೃತ್ತದಲ್ಲಿ ರಾಹುಲ್, ಪ್ರಿಯಾಂಕಾ ಹಾಗೂ ಇತರ ವಿರೋಧ ಪಕ್ಷದ ನಾಯಕರು ಧರಣಿ ನಡೆಸುತ್ತಿದ್ದರು. ಸ್ಥಳದಿಂದ ತೆರಳುವಂತೆ ಪೊಲೀಸರು ಮನವಿ ಮಾಡಿದರೂ ಅವರು ನಿರಾಕರಿಸಿ ಪ್ರತಿಭಟನೆ ಮುಂದುವರಿಸಿದರು. ಬಳಿಕ ಪೊಲೀಸರು ಅವರನ್ನು ಬಲವಂತವಾಗಿ ತೆರವುಗೊಳಿಸಿ, ಬಸ್ ಗಳತ್ತ ಕರೆದೊಯ್ದರು.

ಇದಕ್ಕೂ ಮುನ್ನ ವಿರೋಧ ಪಕ್ಷದ ಸಂಸದರು ಮಧ್ಯ ದಿಲ್ಲಿಯ ರೆಸ್ಟೋರೆಂಟ್ವೊಂದರಲ್ಲಿ ಮಧ್ಯಾಹ್ನದ ಊಟದ ವೇಳೆ ಸಭೆ ನಡೆಸಿದ್ದರು. ಅಲ್ಲಿಂದ ಬಸ್ ಗಳಲ್ಲಿ ಜಂತರ್ ಮಂತರ್ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ತೆರಳುತ್ತಿದ್ದ ರಾಹುಲ್ ಗಾಂಧಿ, ಇತರ ಸಂಸದರು ಹಾಗೂ ನಾಯಕರನ್ನು ಪೊಲೀಸರು ತಡೆದಿದ್ದರು. ಹೀಗಾಗಿ ಅವರು ಶಾಂಗ್ರಿ-ಲಾ ಹೋಟೆಲ್ ಬಳಿಯ ವೃತ್ತದಲ್ಲೇ ಧರಣಿ ಮುಂದುವರಿಸಿದರು.

ಈ ವೇಳೆ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಇತರ ಮಹಿಳಾ ನಾಯಕಿಯರೊಂದಿಗೆ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ಜಮಾಯಿಸಿದ್ದರು. ಮೊದಲು ರಾಹುಲ್ ಗಾಂಧಿ ಅವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದರು. ಅವರನ್ನು ಭುಜದ ಮೇಲೆ ಹೊತ್ತುಕೊಂಡು ಪೊಲೀಸ್ ಬಸ್ ನೊಳಗೆ ಕೂರಿಸಿದರು. ಬಳಿಕ ಬಸ್ ಗಳನ್ನು ಸ್ಥಳದಿಂದ ಕರೆದೊಯ್ಯಲಾಯಿತು.

ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಉದಯ್ ಭಾನು ಚಿಬ್ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರು ರಾಹುಲ್ ಗಾಂಧಿ ಇದ್ದ ಬಸ್ ನ ಮೇಲ್ಭಾಗಕ್ಕೆ ಹತ್ತಿದರು. ಇದೇ ವೇಳೆ ಮುಮ್ತಾಜ್ ಪಟೇಲ್ ಅವರು ಬಸ್ ನ ಬಾನೆಟ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಯ ದೊಡ್ಡ ತಂಡವು ರಸ್ತೆಯಲ್ಲಿ ಧರಣಿ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿ ಮತ್ತು ಇತರ ಮಹಿಳೆಯರನ್ನು ತೆರವುಗೊಳಿಸಲು ಮುಂದಾಯಿತು. ಅವರನ್ನು ಬಲವಂತವಾಗಿ ಎತ್ತಿ ಬಸ್ ಗಳಲ್ಲಿ ಕೂರಿಸಿ ಸ್ಥಳದಿಂದ ಕರೆದೊಯ್ಯಲಾಯಿತು.

ವಿರೋಧ ಪಕ್ಷದ ಇನ್ನೂ ಹಲವು ಸಂಸದರನ್ನು ಪೊಲೀಸರು ವಶಕ್ಕೆ ಪಡೆದರು. ಜಂತರ್ ಮಂತರ್ ಗೆ ತೆರಳಲು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಶಾಂಗ್ರಿ-ಲಾ ವೃತ್ತದಲ್ಲೇ ಪ್ರತಿಭಟನೆ ನಡೆಸಿದ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಿತು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries