HEALTH TIPS

ಜಂತರ್ ಮಂತರ್ ನಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಪ್ರತಿಭಟನಾಕಾರರ ವಿರುದ್ಧ ಮೂರು ಪ್ರಕರಣ ದಾಖಲು

ನವದೆಹಲಿ: ಮತಪಟ್ಟಿಗಳ ತೀವ್ರ ಮತಪಟ್ಟಿ ಪರಿಷ್ಕರಣೆಯ (SIR) ವೇಳೆ ಅಕ್ರಮಗಳು ನಡೆದಿವೆ ಎಂದು ಕೇಳಿ ಬಂದಿರುವ ಆರೋಪಗಳ ನೈತಿಕ ಹೊಣೆ ಹೊತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಲು ಯತ್ನಿಸಿದ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕ ಸಂಘಟನೆಗಳ ಹೋರಾಟಗಾರರ ವಿರುದ್ಧ ದಿಲ್ಲಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು hindustantimes.com ವರದಿ ಮಾಡಿದೆ. 


ಪೊಲೀಸ್ ಅಧಿಕಾರಿಗಳು ದೈನಂದಿನ ದಿನಚರಿಯಲ್ಲಿ ಮಾಡಿರುವ ದಾಖಲನ್ನು ಆಧರಿಸಿ ಪಾರ್ಲಿಮೆಂಟ್ ಸ್ಟ್ರೀಟ್ ಹಾಗೂ ಕನ್ಹಾಟ್ ಪ್ಲೇಸ್ ಪೊಲೀಸ್ ಠಾಣೆ ಸೇರಿದಂತೆ ಎರಡು ಪೊಲೀಸ್ ಠಾಣೆಗಳಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕ ಅಧಿಕಾರಿಯೊಬ್ಬರು ಸೂಕ್ತವಾಗಿ ಜಾರಿಗೊಳಿಸಿದ ಆದೇಶಕ್ಕೆ ಅವಿಧೇಯತೆ ತೋರಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತೆಯ 223ನೇ ಸೆಕ್ಷನ್ ಅಡಿ ಈ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಎಫ್‌ಐಆರ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಹೆಸರುಗಳನ್ನು ಶಂಕಿತರು ಅಥವಾ ಆರೋಪಿಗಳ ಕಲಂ ಅಡಿ ಉಲ್ಲೇಖಿಸಿಲ್ಲ. ಆದರೆ, ಎಫ್‌ಐಆರ್ ಗಳ ವಿಷಯ ಭಾಗದಲ್ಲಿ ಪ್ರತಿಭಟನೆಯ ಸಂಘಟಕರು ಮತ್ತು ಸಂಘಟನೆಗಳು ಹಾಗೂ ಪ್ರತಿಭಟನೆಯನ್ನು ಪ್ರಸ್ತಾಪಿಸಿದ ಮತ್ತು ಭಾಗಿಯಾದವರನ್ನು ಉಲ್ಲೇಖಿಸಲಾಗಿದೆ" ಎಂದು ಹೆಸರೇಳಲಿಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ.










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries