ಬದಿಯಡ್ಕ: ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ 17 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬದಿಯಡ್ಕದ ಖಾಸಗಿ ಶಿಕ್ಷಣ ಸಂಸ್ಥೆಗೆ ತೆರಳಿದ್ದ ಬಾಲಕಿ ಮನೆಗೆ ಮರಳದೆ ನಾಪತ್ತೆಯಾಗಿದ್ದಾಳೆ. ಸೋಮವಾರ ಮಧ್ಯಾಹ್ನ ಮಗಳು ಬದಿಯಡ್ಕಕ್ಕೆ ತರಗತಿಗೆಂದು ತೆರಳಿದ್ದು, ಬಳಿಕ ಮನೆಗೆ ವಾಪಸಾಗಿಲ್ಲ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


