ಕಾಸರಗೋಡು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಅಂಗವಾಗಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾಸರಗೋಡು ತಾಲೂಕು ಸಮಿತಿಯ ವತಿಯಿಂದ ಗೌರವ ಸಮರ್ಪಿಸಲಾಯಿತು.
ಪರಿಷತ್‌ನ ತಾಲೂಕು ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಿದರು.


