HEALTH TIPS

ಶ್ರೀಸ್ಕಂದ ಯಕ್ಷಸಿರಿ ಪ್ರಶಸ್ತಿಗೆ ವೆಂಕಟ್ರಮಣ ಕೂಡ್ಲು ಆಯ್ಕೆ

ಅ. 25ರಂದು ಶ್ರೀಸ್ಕಂದ ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವ: 14 ಮಕ್ಕಳಿಗೆ ಪ್ರಮಾಣಪತ್ರ ವಿತರಣೆ

ಕಾಸರಗೋಡು: ಯಕ್ಷಗಾನ ಕ್ಷೇತ್ರಕ್ಕೆ ಹೊಸ ತಲೆಮಾರಿನ ಮಕ್ಕಳನ್ನು ತರಬೇತುಗೊಳಿಸುವ ಉದ್ದೇಶದಿಂದ ಸ್ಥಾಪಿಸಲಾದ ಕೂಡ್ಲು ಪಾಯಿಚ್ಚಾಲಿನ ಶ್ರೀಸ್ಕಂದ ಯಕ್ಷಗಾನ ಕೇಂದ್ರದ ‘ಶ್ರೀಸ್ಕಂದ ಯಕ್ಷಸಿರಿ’ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಹಿಮ್ಮೇಳ ಪರಿಕರಗಳ ತಯಾರಕ ವೆಂಕಟ್ರಮಣ ಕೂಡ್ಲು ಆಯ್ಕೆಯಾಗಿದ್ದಾರೆ.


ಅಕ್ಟೋಬರ್ 25ರಂದು ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಸರಸ್ವತಿ ಮಂಟಪದಲ್ಲಿ ನಡೆಯಲಿರುವ ಕೇಂದ್ರದ ಎರಡನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ವೆಂಕಟ್ರಮಣ ಕೂಡ್ಲು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಯಕ್ಷಗಾನ ತರಬೇತಿಯನ್ನು ಪೂರ್ಣಗೊಳಿಸಿದ 14 ಮಕ್ಕಳಿಗೆ ನಾಟ್ಯಗುರು ರಂಜಿತ್ ಗೋಳಿಯಡ್ಕ ಪ್ರಮಾಣಪತ್ರ ವಿತರಿಸಲಿದ್ದಾರೆ.

ಕೇಂದ್ರದ ಅಧ್ಯಕ್ಷ ಕಿರಣ್ ಪ್ರಸಾದ್ ಕೂಡ್ಲು ಅಧ್ಯಕ್ಷತೆ ವಹಿಸಲಿದ್ದಾರೆ. ಶೇಷವನ ಕ್ಷೇತ್ರದ ಅರ್ಚಕ ಸುಬ್ರಾಯ ಕಾರಂತ, ಮಧೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭಾನುಪ್ರಕಾಶ್, ಪತ್ರಕರ್ತ ರಂಜಿತ್ ಮನ್ನಿಪ್ಪಾಡಿ, ಹಿರಿಯ ಯಕ್ಷಗಾನ ಭಾಗವತ ತಲ್ಪನಾಜೆ ವೆಂಕಟ್ರಮಣ ಭಟ್ ಹಾಗೂ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಉದಯಕುಮಾರ್ ಕುಮಾರಧಾರ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಕೇಂದ್ರದ ವಿದ್ಯಾರ್ಥಿಗಳಿಂದ ‘ಸುಂದೋಪಸುಂದ ಕಾಳಗ–ಶಶಿಪ್ರಭಾ ಪರಿಣಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.






 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries