HEALTH TIPS

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ನವದೆಹಲಿ:  ನೂತನ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್‌ರನ್ನು ನೇಮಿಸಲಾಗಿದೆ ಎಂದು ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ಹಾಲಿ ವಾಯುಪಡೆ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದಾರೆ.

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ದೀಕ್ಷಿತ್, 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ವಿಭಾಗಕ್ಕೆ ನಿಯೋಜನೆಗೊಂಡಿದ್ದರು.

59 ವರ್ಷದ ಈ ಹಿರಿಯ ಅಧಿಕಾರಿ 2028 ಡಿಸೆಂಬರ್ 31ರವರೆಗೆ ಈ ಉನ್ನತ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ವಿಮಾನ ಹಾರಾಟ ಬೋಧಕರಾಗಿರುವ ಅವರು ಮಿರಾಜ್-2000, ವಿವಿಧ ಮಾದರಿಯ ಮಿಗ್, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ವಿವಿಧ ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ.

ಸುಮಾರು ನಾಲ್ಕು ದಶಕಗಳ ಸೇವಾ ಅವಧಿಯಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಮತ್ತು ಆಪರೇಷನ್ ಸಿಂಧೂರ್ ಸೇರಿದಂತೆ ಹಲವಾರು ಮಹತ್ವದ ಸಮರ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries