HEALTH TIPS

ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನ ಬಿಡುಗಡೆ- ಮೀಂಜ ಪಂಚಾಯತಿ ಅಧ್ಯಕ್ಷ ಸಿ.ಎ. ತಾಜುದ್ದೀನ್ ಅವರಿಂದ ಅನಾವರಣ

ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎ. ತಾಜುದ್ದೀನ್ ಬಿಡುಗಡೆಗೊಳಿಸಿದರು.


ಅಕ್ಟೋಬರ್ 26 ರಂದು ಕಲೋತ್ಸವ ನಡೆಯಲಿರುವ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಹಾಗೂ ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಅನಾವರಣಗೊಳಿಸಲಾಯಿತು. ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಲೀಂ ಎಂ.ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕ ಡಾ. ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ, ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ., ಉಪಜಿಲ್ಲಾ ವಿದ್ಯಾಧಿಕಾರಿ ನಾರಾಯಣ ದೇಲಂಪಾಡಿ, ಮಂಜೇಶ್ವರ ಠಾಣೆಯ ಪೆÇಲೀಸ್ ಅಧಿಕಾರಿ ಸಂತೋಷ್, ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ರಮೇಶ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಮೃದುಲಾ ಹಾಗೂ ಯು.ಪಿ. ಶಾಲೆಯ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಉಪಸ್ಥಿತರಿದ್ದರು.

ಮೀಂಜ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಕಲೋತ್ಸವದ ಲಾಂಛನವನ್ನು ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಅಧ್ಯಾಪಕ ಕೃಷ್ಣ ಶರ್ಮ ವಿನ್ಯಾಸಗೊಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries