HEALTH TIPS

ಕೇರಳಂ ಕಾಂಗ್ರೆಸ್‌ನಲ್ಲಿ ಭಿನ್ನಮತ: ಸಿಎಂ ಸತೀಶನ್ ವಿರುದ್ಧ ಎಐಸಿಸಿಗೆ ದೂರು

ತಿರುವನಂತಪುರ: ಕೇರಳಂ ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಕಾಂಗ್ರೆಸ್ ಸಂಸದ ಹಾಗೂ ಯುಡಿಎಫ್‌ ಸಂಚಾಲಕ ಅಡೂರ್ ಪ್ರಕಾಶ್ ಎಐಸಿಸಿ ನಾಯಕತ್ವದ ಗಮನಕ್ಕೆ ತಂದಿದ್ದಾರೆ. 


ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಪ್ರಕಾಶ್, ಶೀಘ್ರದಲ್ಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಹಲವು ವಿಷಯಗಳಲ್ಲಿ ಪಕ್ಷದೊಂದಿಗೆ ಸತೀಶನ್ ಸಮಾಲೋಚನೆ ನಡೆಸುತ್ತಿಲ್ಲ ಎಂದು ಪ್ರಕಾಶ್ ಈ ಹಿಂದೆ ಬಹಿರಂಗವಾಗಿ ಆರೋಪಿಸಿದ್ದರು.

ಸಮಸ್ಯೆಗಳನ್ನು ಬಗೆಹರಿಸಲು ಪಕ್ಷ ಹಾಗೂ ಸರ್ಕಾರದ ನಡುವಿನ ಸಮನ್ವಯಕ್ಕೆ ಸಮಿತಿ ರಚನೆ ಹಾಗೂ ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳಿಗೆ ನೇಮಕ ಮಾಡುವಾಗ ಪಕ್ಷದೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ವಿವಿಧ ಮಂಡಳಿ ಮತ್ತು ನಿಗಮಗಳಿಗೆ 150ಕ್ಕೂ ಹೆಚ್ಚು ರಾಜಕೀಯ ನೇಮಕಗಳು ಇನ್ನೂ ಬಾಕಿ ಇವೆ.

ಕೇರಳಂ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ನೇಮಕವೂ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷ ಸನ್ನಿ ಜೋಸೆಫ್ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಸಂಸದರಾದ ಕೊಡಿಕುನ್ನಿಲ್ ಸುರೇಶ್ ಹಾಗೂ ಶಾಫಿ ಪರಂಬಿಲ್ ಅವರ ಹೆಸರುಗಳು ಪರಿಗಣನೆಯಲ್ಲಿವೆ.

ಇದೇ ವೇಳೆ, ಪಕ್ಷದ ಆಂತರಿಕ ವಿಚಾರಗಳ ಕುರಿತು ನಾಯಕರು ಬಹಿರಂಗ ಹೇಳಿಕೆ ನೀಡದಂತೆ ಕೆಪಿಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಪ್ರಕಾಶ್ ಅವರನ್ನು ಬೆಂಬಲಿಸಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ಜೆ.ಬಿ ಮಾಥರ್ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಮುಸ್ಲಿಂ ಲೀಗ್ ನಾಯಕ ಎಂ.ಕೆ. ಮುನೀರ್ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿರುವುದು ಪಕ್ಷದ ಹಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ 150ಕ್ಕೂ ಹೆಚ್ಚು ಸ್ಥಾನಗಳ ನೇಮಕ ಬಾಕಿ ಉಳಿದಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries