HEALTH TIPS

ಸರಣಿ ಅಪಘಾತ: ಇಬ್ಬರು ಬೈಕ್ ಸವಾರರಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ಕಲ್ಲಂಗೈ ಎಂಬಲ್ಲಿ ಶುಕ್ರವಾರ ಮುಂಜಾನೆ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಅಪಘಾತ ಮುಂಜಾನೆ ಸುಮಾರು 2.30ರ ವೇಳೆಗೆ ನಡೆದಿದೆ. 


ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರೊಂದು ಮೊದಲು ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದು ರಸ್ತೆಯಲ್ಲೇ ಪಲ್ಟಿಯಾಗಿದೆ.

ಇದೇ ವೇಳೆ ಕಾರಿನ ಹಿಂಬದಿಯಿಂದ ಬರುತ್ತಿದ್ದ ಲಾರಿಯೊಂದು ಪಲ್ಟಿಯಾದ ಕಾರಿಗೆ ಢಿಕ್ಕಿ ಹೊಡೆದಿದೆ.

ಕಾರು ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ ಬೆನ್ನಲ್ಲೇ, ಲಾರಿಯ ಹಿಂಭಾಗದಲ್ಲಿದ್ದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕೂಡ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜುಗಳು ಸಂಪೂರ್ಣ ಪುಡಿಯಾಗಿವೆ.

ಇದೇ ಸಂದರ್ಭದಲ್ಲಿ ಆ ಮಾರ್ಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಸರಗೋಡು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಪಘಾತದಿಂದ ಬಸ್ಸಿನ ಮುಂಭಾಗದ ಬಾಗಿಲು ಸಂಪೂರ್ಣ ಜಖಂಗೊಂಡಿದ್ದರಿಂದ ಒಳಗಡೆ ಸಿಲುಕಿದ್ದ ಪ್ರಯಾಣಿಕರನ್ನು ಬಸ್ಸಿನ ತುರ್ತು ನಿರ್ಗಮನದ ಬಾಗಿಲಿನ ಮೂಲಕ ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.

ಅಗ್ನಿಶಾಮಕ ದಳದ ಅಧಿಕಾರಿ ಸುಕು ವರ್ಗೀಸ್ ಅವರ ನೇತೃತ್ವದಲ್ಲಿ ಸಿಬ್ಬಂದಿಯಾದ ಎಂ.ಎ. ವೈಶಾಖ್, ಪಿ.ಸಿ. ಸಿರಾಜುದ್ದೀನ್, ರಮೇಶ್, ಪ್ರಣವ್, ಹರಿಕುಮಾರ್, ಪ್ರಜಿತ್, ಆನಂದು ಹಾಗೂ ಹೋಂ ಗಾರ್ಡ್‌ಗಳಾದ ರಾಜೇಂದ್ರನ್ ಮತ್ತು ಸುಭಾಷ್ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries