HEALTH TIPS

ಜ್ಞಾನೇಶ್ ವಿರುದ್ಧ ಪದಚ್ಯುತಿ ನೋಟಿಸ್ ಸದ್ಯಕ್ಕಿಲ್ಲ: 'ಇಂಡಿಯಾ' ಒಕ್ಕೂಟ ನಿರ್ಧಾರ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಹೊಸ ಪದಚ್ಯುತಿ ನೋಟಸ್ ಸಲ್ಲಿಕೆಯನ್ನು ಸದ್ಯಕ್ಕೆ ಮುಂದೂಡಲು 'ಇಂಡಿಯಾ' ಒಕ್ಕೂಟ ನಿರ್ಧರಿಸಿದಂತೆ ಕಾಣುತ್ತದೆ. ಚುನಾವಣಾ ಆಯೋಗದ ಸಹಾಯದಿಂದ ನರೇಂದ್ರ ಮೋದಿ ಸರ್ಕಾರವು ಮತಗಳವು ನಡೆಸಿದೆ ಎನ್ನುವುದರ ಬಗ್ಗೆ ಹೆಚ್ಚಿನ ಪ್ರತಿಭಟನೆ ನಡೆಸಲು ಉದ್ದೇಶಿಸಿರುವುದರಿಂದ ಈ ನಿರ್ಧಾರ ತಾಳಲಾಗಿದೆ.

ಬುಧವಾರ ನಡೆದ ಒಕ್ಕೂಟದ ಸಭೆಯಲ್ಲಿ, ಜ್ಞಾನೇಶ್ ಕುಮಾರ್ ವಿರುದ್ಧ ಪದಚ್ಯುತಿ ನೋಟಿಸ್ ನೀಡುವ ವಿಷಯಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಸಿಇಸಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸುವುದು ಮತ್ತು ಚುನಾವಣಾ ಅಕ್ರಮಗಳ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಸಂಸತ್ತಿನಲ್ಲಿ ಸಂಖ್ಯಾಬಲವೂ ಇಲ್ಲದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಚುನಾವಣಾ ಆಯೋಗದ ಕಾರ್ಯವೈಖರಿ ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನುವ ವರದಿ ದೇಶದಲ್ಲಿ ಸಂಚಲನ ಸೃಜಿಸಿದ ಬೆನ್ನಲ್ಲೇ, ಜ್ಞಾನೇಶ್‌ ಕುಮಾರ್‌ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಹೊಸ ನೋಟಿಸ್ ಸಲ್ಲಿಸಲುಸಿದ್ಧತೆ ನಡೆಸುತ್ತಿರುವುದಾಗಿ ಪ್ರತಿಪಕ್ಷ ನಾಯಕರು ಹೇಳಿದ್ದರು.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ವಕೀಲ ಹಾಗೂ ಸಂಸದ ಕಪಿಲ್‌ ಸಿಬಲ್‌, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಲ್ಲಿಸಲಾಗಿದ್ದ ಮೊದಲ ಪದಚ್ಯುತಿ ನೋಟಿಸ್‌ ತಿರಸ್ಕೃತವಾಗಿದ್ದು ಹಾಗೂ ಎರಡನೇ ನೋಟಿಸ್‌ ರಾಜ್ಯಸಭೆಯಲ್ಲಿ ಇನ್ನೂ ಬಾಕಿ ಇರುವುದನ್ನು ಪ್ರಸ್ತಾಪಿಸಿದರು. ಹೊಸದಾಗಿ ಮತ್ತೊಂದು ನೋಟಿಸ್‌ ಸಲ್ಲಿಸುವುದರಿಂದ ಏನೂ ಪ್ರಯೋಜನವಾಗದು ಎಂದು ಅವರು ಅಭಿಪ್ರಾಯಪಟ್ಟರು ಎಂದು ಮೂಲಗಳು ತಿಳಿಸಿವೆ.

ಎಸ್‌ಐಆರ್ ಹಾಗೂ ಇತರ ಚುನಾವಣಾ ಅಕ್ರಮಗಳ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ನಡೆಸುವುದರ ಜೊತೆಗೆ, 2023ರ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆಯನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಬೇಕು ಎಂದು ಸಿಬಲ್‌ ಸಲಹೆ ನೀಡಿದ್ದಾರೆಂದು ಗೊತ್ತಾಗಿದೆ.

ಜ್ಞಾನೇಶ್‌ ಕುಮಾರ್‌ ಅವರನ್ನು ಬಂಧಿಸುವುದು ಸಾಧ್ಯವಾಗುವುದಿಲ್ಲ. ಅವರಿಗೆ ಕಾನೂನು ರಕ್ಷಣೆ ಇದೆ ಎಂದು ಸಿಬಲ್‌ ಸಭೆಯಲ್ಲಿ ಹೇಳಿದ್ದಾರೆ. ಅಲ್ಲದೆ 2023ರ ಕಾಯ್ದೆಯನ್ನು ಪ್ರಶ್ನಿಸಿ ಇಂಡಿಯಾ ಒಕ್ಕೂಟದ ಪರವಾಗಿ ಜಂಟಿ ಅರ್ಜಿ ಸಲ್ಲಿಸುವಂತೆ ಅವರು ಸಲಹೆ ನೀಡಿದ್ದಾರೆ.

ಅಲ್ಲದೆ ಕಾನೂನು ರಕ್ಷಣೆ ಹೊಂದಿರದ ಅಧಿಕಾರಿಗಳ ವಿರುದ್ಧ ಮೊದಲು ಎಫ್‌ಐಆರ್‌ ದಾಖಲಿಸಬೇಕು ಎಂದೂ ಅವರು ಸಲಹೆ ನೀಡಿದರು. ಚುನಾವಣಾ ಆಯೋಗದ ಐಟಿ ವಿಭಾಗದ ಮುಖ್ಯಸ್ಥೆ ಸೀಮಾ ಖನ್ನಾ ವಿರುದ್ಧ ಮೊದಲು ಪ್ರಕರಣ ದಾಖಲಿಸುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಸೀಮಾ ಖನ್ನಾ ಅವರನ್ನು ಬಂಧಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದು, ಸಭೆಯಲ್ಲಿ ಇತರ ಕೆಲವರು ಕೂಡ ಅದನ್ನು ಬೆಂಬಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries