ಬದಿಯಡ್ಕ: ಇಲ್ಲಿನ ಚಿನ್ಮಯ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಶಾಲೆಯ ಮುಖ್ಯೋಪಾಧ್ಯಾಯಿನಿ ಮಾನಸ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕ್ರೀಡಾ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು, ಸಹಕಾರ, ಪರಸ್ಪರ ಗೌರವ, ಆತ್ಮವಿಶ್ವಾಸ ಹಾಗೂ ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತವೆ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಕ್ರೀಡಾಸಕ್ತಿ, ಪ್ರತಿಭೆ ಹಾಗೂ ದೈಹಿಕ ಸಾಮಥ್ರ್ಯವನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸೌಮ್ಯ, ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳ ಪೆÇೀಷಕರು ಉಪಸ್ಥಿತರಿದ್ದು, ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡಿದರು.

.jpg)
.jpg)
