ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಅಪರಾಧಿ, ಮಾಲೋಂ ಚುಳ್ಳಿ ನಿವಾಸಿ ಕುಬ್ಲಿಂಗಲ್ ಪ್ರಿನ್ಸ್ ಸಿರಿಯಾಕ್ (47)ಎಂಬಾತನಿಗೆ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 15ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಎರಡು ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಹೊಸದುರ್ಗ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ. ಸುರೇಶ್ ಈ ತೀರ್ಪು ನೀಡಿದ್ದಾರೆ.
ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ 14ರ ಹರೆಯದ ಬಾಲಕಿ ತನ್ನ ಸ್ನೇಹಿತೆಯ ತಂದೆ ಚಲಾಯಿಸುತ್ತಿದ್ದ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದಳು. ಆಕೆಯ ಪಕ್ಕದಲ್ಲಿ ಕುಳಿತಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೊಸದುರ್ಗ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.


