HEALTH TIPS

ಸಿಇಸಿಯಿಂದ ಮತಕಳವು ಜಾರಿ; ತಕ್ಕ ಬೆಲೆ ತೆರಬೇಕು: ರಾಹುಲ್‌ ಗಾಂಧಿ

ಮಡಗಾಂವ್‌: 'ಮತಕಳವಿನ ಕುರಿತು ಹಿಂದಿನ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆ ರೂಪಿಸಿದರೆ, ಗೃಹ ಸಚಿವ ಅಮಿತ್‌ ಶಾ ಅವರು ಕಾರ್ಯಗತಗೊಳಿಸುತ್ತಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಮತಕಳವು ಜಾರಿಗೊಳಿಸುತ್ತಿದ್ದಾರೆ' ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. 


ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜ್ಞಾನೇಶ್‌ ಕುಮಾರ್‌ ಅವರು ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದು, ಮತ ಕಳವಿಗೆ ಬೆಲೆ ತೆರಲಿದ್ದಾರೆ' ಎಂದು ಹೇಳಿದ್ದಾರೆ.

ದಕ್ಷಿಣ ಗೋವಾದ ಮಡಗಾಂವ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 'ಸರ್ಕಾರದ ಬೇಡಿಕೆಗಳನ್ನು ಪೂರೈಸುವ ಶತ ಕೋಟ್ಯಧಿಪತಿಗಳಿಗೆ ಸರ್ಕಾರದ ಗುತ್ತಿಗೆಗಳನ್ನು ಕೊಡುವ ವ್ಯವಸ್ಥೆಯನ್ನು ನಿರ್ಮಿಸಲಾಗಿದೆ' ಎಂದು ಆರೋಪಿಸಿದ್ದಾರೆ.

ರ‍್ಯಾಲಿಗೂ ಮುನ್ನ ರಾಹುಲ್‌ ಗಾಂಧಿ ಅವರು ಗೋವಾ ರಾಜ್ಯ ಕಾಂಗ್ರೆಸ್‌ ಘಟಕದಿಂದ ಹಮ್ಮಿಕೊಂಡಿದ್ದ 'ಗೋವಾ ರಕ್ಷಿಸಿ ಯಾತ್ರೆ'ಯಲ್ಲಿ ಪಾಲ್ಗೊಂಡು 1 ಕಿ.ಮೀ ಕಾರ್ಯಕರ್ತರು ಹಾಗೂ ನಾಯಕರ ಜೊತೆ ಪಾದಯಾತ್ರೆ ನಡೆಸಿದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries