ಬದಿಯಡ್ಕ: ಬೇಳ ಬಿರ್ಮಿನಾಡಕ್ಕ ನಿವಾಸಿ ಸಂಜೀವ ಯಾನೆ ಚೌಕಾರು (65) ಅವರ ಮೃತದೇಹ ಮಧೂರು ಕೊಲ್ಲಯಿಲ್ ರಸ್ತೆಯ ಬದಿಯಲ್ಲಿ ಪತ್ತೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಅವರು ರಸ್ತೆಯ ಬದಿಯಲ್ಲಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸಿದ್ದಾರೆ. ತಕ್ಷಣ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


