ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಭಾನುವಾರ ಕದಿರು ತುಂಬಿಸುವ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ದೇವಸ್ಥಾನದ ಅರ್ಚಕ ಸೂರ್ಯನಾರಾಯಣ ಶರ್ಮ ಅವರು ವಿಶೇಷ ಪೂಜೆ ನೆರವೇರಿಸಿ, ಕದಿರು ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಸಮಿತಿ ಸದಸ್ಯರು ಹಾಗೂ ಊರಿನ ಭಕ್ತಾದಿಗಳು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು. ಧಾರ್ಮಿಕ ಸಂಪ್ರದಾಯದಂತೆ ನಡೆದ ಕಾರ್ಯಕ್ರಮವು ಭಕ್ತಿಭಾವದ ವಾತಾವರಣದಲ್ಲಿ ಸಂಪನ್ನಗೊಂಡಿತು.

.jpg)
.jpg)
