ಕಾಸರಗೋಡು: ಎಡನೀರು ಮಠದ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರರತೀ ಸ್ವಾಮೀಜಿ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಕಾಸರಗೋಡು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ತಿಳಿಸಿದ್ದಾರೆ.
ಅವರು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ಮಂಗಲೋತ್ಸವ ಸಮಾರಂಭದಲ್ಲಿ ಮುಖ್ಯತಿಥಿಂiÀiಗಿ ಭಾಗವಹಿಸಿ ಮಾತನಾಡಿದರು. ಅಗಾಧ ಪಾಂಡಿತ್ಯ ಹೊಂದಿದ್ದ ಕೇಶವಾನಂದ ಭಾರತೀ ಸ್ವಾಮೀಜಿ ಅವರು ಆರು ದಶಕಕ್ಕೂ ಹೆಚ್ಚುಕಾಲ ಎಡನೀರು ಮಠವನ್ನು ಮುನ್ನಡೆಸಿಕೊಂಡು ಬಂದಿರುವುದಲ್ಲದೆ, ಶ್ರೀ ಮಠದ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ದೇಶದ ನ್ಯಾಯಾಂಗಕ್ಕೆ ಮಹತ್ವದ ಕೊಡುಗೆ ನೀಡಿರುವ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಪ್ರಾಥ:ಸ್ಮರಣೀಯರು.
ಬಹುಮುಖ ಪ್ರತಿಭೆಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವ ಬಗ್ಗೆ ಪರಿಗಣಿಸಬೇಕಾದ ಅನಿವಾರ್ಯತೆಯಿದೆ ಎಂದು ತಿಳಿಸಿದರು.



