ಬದಿಯಡ್ಕ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬದಿಯಡ್ಕ ಪಂಚಾಯಿತಿ ಬಡ್ಸ್ ಶಾಲೆಯ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಉದ್ಘಾಟಿಸಿದರು. ವಾರ್ಡು ಸದಸ್ಯ ಹರೀಶ್ ಎ. ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಪಿ.ಎಲ್.ವಿ. ಕೃಷ್ಣವೇಣಿ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. 27 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಬಹುಮಾನಗಳನ್ನು ವಿತರಿಸಿದರು. ಬಡ್ಸ್ ಶಾಲೆಯ ಶಿಕ್ಷಕಿ ವಿನಯ ಸ್ವಾಗತಿಸಿದರು.

.jpg)
