ಉಪ್ಪಳ: ಡಾ. ವೆಂಕಟರಾಜ ಪುಣಿಂಚಿತ್ತಾಯರ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.
ಮಂಜೇಶ್ವರದ ಗಿಳಿವಿಂಡುನಲ್ಲಿ ನಡೆಯಲಿರುವ ಪುವೆಂಪು ನೆನಪು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಆಶೀರ್ವಚನ ನೀಡಿದರು.
ಭಾಷೆ ಮತ್ತು ಸಂಸ್ಕøತಿಯ ಉನ್ನತಿಗಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇಂತಹ ಪ್ರಯತ್ನಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಶ್ರೀಗಳು ಆಶಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಜಯಾನಂದ ಹೊಸದುರ್ಗ, ರವಿ ನಾಯ್ಕಾಪು, ಅಖಿಲೇಶ್ ನಗುಮುಗಂ, ಹರೀಶ್ ಗೋಸಾಡ ಹಾಗೂ ವಕೀಲ ಥೋಮಸ್ ಡಿಸೋಜ ಉಪಸ್ಥಿತರಿದ್ದರು.

.jpg)
.jpg)
