ನವದೆಹಲಿ: 'ಕಾಕ್ರೋಚ್ ಜನತಾ ಪಾರ್ಟಿ' (CJP)ಯ ತಿರಂಗ ಯಾತ್ರೆಗೂ ಮುನ್ನ ಸಂಘಟನೆಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಅವರನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಪ್ರತಿಭಟನಾಕಾರರು ಪೊಲೀಸ್ ವಾಹನವನ್ನು ತಡೆಯಲು ಯತ್ನಿಸಿದರು.
ಈ ಸಂದರ್ಭದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ಅಭಿಜೀತ್ ದೀಪ್ಕೆ, 'ನಾನು ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನನ್ನನ್ನು ಹೇಗೆ ವಶಕ್ಕೆ ಪಡೆಯಲು ಸಾಧ್ಯ? ಯಾವ ಕಾನೂನಿನಡಿ ನನ್ನನ್ನು ವಶಕ್ಕೆ ಪಡೆಯುತ್ತಿದ್ದೀರಿ?' ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.



