HEALTH TIPS

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಎಸ್. ಜೈಶಂಕರ್

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯ ಮೂಲಭೂತ ತತ್ವಗಳು ಬದಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.


ಪ್ರಸ್ತಾವಿತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಭಾರತ ಮತ್ತು ಅಮೆರಿಕ ನಿರಂತರವಾಗಿ ಮಾತುಕತೆ ನಡೆಸುತ್ತಿವೆ. 

ಈ ಪ್ರಕ್ರಿಯೆಯು ಅಂತಿಮ ಹಂತದತ್ತ ಸಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಸ್ತಾವಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ವಿಚಾರವಾಗಿ ಭಾರತ ಮತ್ತು ಅಮೆರಿಕದ ನಡುವಿನ ಮಾತುಕತೆಯು ಯಾವುದೇ ಪ್ರಗತಿಯನ್ನು ಕಾಣದ ಹಂತವನ್ನು ತಲುಪಿರುವಂತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಚೆಗೆ ಹೇಳಿದ್ದರು. ಈ ಕುರಿತು ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.

'ಬ್ಲೂಮ್‌ಬರ್ಗ್ ನ್ಯೂ ಎಕನಾಮಿ ಫೋರಂ'ನಲ್ಲಿ ಎರಡೂ ದೇಶಗಳ ನಡುವಿನ ವ್ಯಾಪಾರ ಒಪ್ಪಂದ ಕುರಿತು ಕೇಳಲಾದ ಪ್ರಶ್ನೆಗೆ ಜೈಶಂಕರ್ ಉತ್ತರಿಸಿದ್ದಾರೆ. 'ನಾವು ಕೆಲವು ವಿಷಯಗಳಿಗಾಗಿ ಕಾಯುತ್ತಿದ್ದೇವೆ. ಸಾರ್ವಜನಿಕವಾಗಿ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ' ಎಂದಿದ್ದಾರೆ.

ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುನ್ನಡೆಸಲು ಭಾರತದ ವಾಣಿಜ್ಯ ಸಚಿವರು, ಅಮೆರಿಕದ ವ್ಯಾಪಾರ ಪ್ರತಿನಿಧಿ ಸಂಸ್ಥೆಯು (ಯುಎಸ್‌ಟಿಆರ್) ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆಯಲ್ಲಿ ನಿರತರಾಗಿದ್ದಾರೆ ಎಂದು ಜೈಶಂಕರ್ ವಿವರಿಸಿದ್ದಾರೆ.

'ಅಮೆರಿಕದಂತಹ ದೊಡ್ಡ ಆರ್ಥಿಕತೆಯೊಂದಿಗೆ ಬೇರೆ ದೇಶಗಳು ಮಾತುಕತೆ ನಡೆಸುವಾಗ, ಸಹಜವಾಗಿಯೇ ಒಂದು ಭಾಗವು ನಮ್ಮ ಮತ್ತು ಅಮೆರಿಕ ನಡುವೆ ಏರ್ಪಡುವ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿರುತ್ತದೆ. ಇನ್ನೊಂದು ಭಾಗವು ಸ್ಪರ್ಧಾತ್ಮಕ ಆರ್ಥಿಕತೆಗಳಿಗೆ ಹೋಲಿಸಿದರೆ ನಾವು ಹೇಗೆ ಪ್ರಗತಿ ಸಾಧಿಸಿದ್ದೇವೆ ಎಂಬುದಕ್ಕೆ ಸಂಬಂಧಿಸಿದ್ದಾಗಿರುತ್ತದೆ' ಎಂದಿದ್ದಾರೆ.

ಆದರೆ, ಈ ವಿಷಯದ ಆ ಭಾಗವು ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ. ಏಕೆಂದರೆ ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿಲ್ಲ. ಸಂಬಂಧಪಟ್ಟವರು... ಅಂದರೆ ಅಮೆರಿಕದ ವ್ಯಾಪಾರ ಸಚಿವರು, ಯುಎಸ್‌ಟಿಆರ್ ಹಾಗೂ ನಮ್ಮ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಈ ಕುರಿತು ಕೆಲಸ ಮಾಡುತ್ತಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಇತ್ಯರ್ಥಪಡಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಸುಂಕದ ಸಂಘರ್ಷ ಬಗೆಹರಿಸಲು ಮತ್ತು ದ್ವಿಪಕ್ಷೀಯ ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸಲು ಭಾರತ ಮತ್ತು ಅಮೆರಿಕ 2025ರ ಆರಂಭದಿಂದಲೂ ಪ್ರಸ್ತಾವಿತ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿವೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries