ಸಮರಸ ಚಿತ್ರಸುದ್ದಿ: ಬದಿಯಡ್ಕ: ಇತ್ತೀಚೆಗೆ ಮಳೆಯಿಂದಾಗಿ ಕುಸಿದು ಬಿದ್ದಿರುವ ಪೆರಡಾಲ ಸರ್ಕಾರಿ ಪ್ರೌಢಶಾಲೆಯ ಗೋಡೆಯನ್ನು ಮರಳಿ ನಿರ್ಮಿಸುವಂತೆ ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ ಅವರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಅವರಿಗೆ ಮನವಿ ನೀಡಿದರು. ಆವರಣ ಗೋಡೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಕೂಡಲೇ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಿ ಎಸ್ಟಿಮೇಟ್ ಸಿದ್ದಪಡಿಸಲು ಆದೇಶ ನೀಡಿದ್ದಾರೆ.

.jpg)
