HEALTH TIPS

ಪ್ರತಿಭಟನೆಗಳ ಸಂದರ್ಭ ಭದ್ರತಾ ಸಿಬ್ಬಂದಿ ಬಾಡಿ ಕ್ಯಾಮೆರಾ ಧರಿಸುವಂತೆ ನಿರ್ದೇಶಿಸಲು ದಿಲ್ಲಿ ಹೈಕೋರ್ಟ್ ನಿರಾಕರಣೆ

 ನವದೆಹಲಿ: ಪ್ರತಿಭಟನೆಯ ಸಂದರ್ಭ ನಿಯೋಜಿಸಲಾಗುವ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯ ಪಡೆ (RAF) ಸಿಬ್ಬಂದಿ ಕಡ್ಡಾಯವಾಗಿ ಬಾಡಿ ಕ್ಯಾಮೆರಾಗಳನ್ನು ಧರಿಸುವಂತೆ ನಿರ್ದೇಶಿಸಲು ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ನಿರಾಕರಿಸಿದೆ.


ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮನವಿಯನ್ನಾಗಿ ಪರಿಗಣಿಸಿ ಆರು ತಿಂಗಳೊಳಗೆ ತೀರ್ಮಾನ ತೆಗೆದುಕೊಳ್ಳುವಂತೆ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಸರಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳದಿದ್ದರೆ, ಅರ್ಜಿದಾರರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಉಸ್ತುವಾರಿ ನ್ಯಾಯಮೂರ್ತಿ ನಿತಿನ್ ವಾಸುದೇವ್ ಸಾಂಬ್ರೆ ಮತ್ತು ನ್ಯಾಯಮೂರ್ತಿ ಅರುಣ್ ಭಾರದ್ವಾಜ್ ಅವರ ಪೀಠ ಹೇಳಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಜುಲೈಯಲ್ಲಿ ನಡೆದ ಪ್ರತಿಭಟನೆಗಳ ಬೆನ್ನಲ್ಲೇ ಈ ಅರ್ಜಿ ಸಲ್ಲಿಕೆಯಾಗಿತ್ತು. ಜುಲೈ 20ರಂದು ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಹಲವು ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿ ಪ್ರಹಾರ, ಅಶ್ರುವಾಯು ಮತ್ತು ಪೆಲೆಟ್ ಗನ್ಗಳನ್ನು ಬಳಸಿದ ಪರಿಣಾಮ ಹಲವರು ಗಾಯಗೊಂಡಿದ್ದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅರ್ಜಿದಾರರು, ತಮ್ಮ ವಿರುದ್ಧ ಭದ್ರತಾ ಸಿಬ್ಬಂದಿ ಅತಿಯಾದ ಬಲ ಪ್ರಯೋಗ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷ್ಯವು ಹೆಚ್ಚಾಗಿ ಹತ್ತಿರದಲ್ಲಿದ್ದವರು ರೆಕಾರ್ಡ್ ಮಾಡಿದ ಅಧಿಕೃತವಲ್ಲದ ಮೊಬೈಲ್ ಫೋನ್ ವೀಡಿಯೊಗಳನ್ನು ಆಧರಿಸಿದೆ ಎಂದಿದ್ದಾರೆ.

ಭದ್ರತಾ ಸಿಬ್ಬಂದಿ ಕ್ಯಾಮೆರಾಗಳನ್ನು ಧರಿಸಬೇಕೆಂಬ ಕಡ್ಡಾಯ ಕಾನೂನು ಚೌಕಟ್ಟು ಇಲ್ಲದಿರುವುದು ನಾಗರಿಕರ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಶಾಂತಿಯುತವಾಗಿ ಸಭೆ ಸೇರುವ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಎಂದು ಅವರು ವಾದಿಸಿದ್ದರು ಎಂದು 'ಲೈವ್ ಲಾ' ವರದಿ ಮಾಡಿದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries