ಕಾಸರಗೋಡು: ವಿಶ್ವ ಪಾರ್ಶ್ವವಾಯು ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನೀಲೇಶ್ವರಂ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಸಿ.ಎಂ. ಮೀನಾಕುಮಾರಿ ಉದ್ಘಾಟಿಸಿದರು.
ಕಾರಿಯಿಲ್ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚೆರುವತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪಿ. ಮಿನಿಮೋಳ್ ಅಧ್ಯಕ್ಷತೆ ವಹಿಸಿದ್ದರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿಧರನ್ ಪೆರಿಂಗೇತ್, ಎಂ. ರಾಮಚಂದ್ರನ್, ವಾರ್ಡ್ ಸದಸ್ಯೆ ಎ.ಕೆ. ಶೀನಾ, ತಾಂತ್ರಿಕ ಸಹಾಯಕ ಎಂ. ಚಂದ್ರನ್, ಜಿಲ್ಲಾ ಉಪ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಪಿ.ಪಿ. ಹಸೀಬ್, ತುರತ್ತಿ ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಇ. ಸಿಯಾದ್ ಹಾಗೂ ಸಾರ್ವಜನಿಕ ಆರೋಗ್ಯ ನರ್ಸ್ ಆರ್. ಪೂಮಣಿ ಮಾತನಾಡಿದರು.
ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಕ ಸಿ.ಕೆ. ಅರುಣ್ ಕುಮಾರ್ ವಂದಿಸಿದರು.
ಬಳಿಕ ನಡೆದ ಜಾಗೃತಿ ವಿಚಾರ ಸಂಕಿರಣದಲ್ಲಿ ನೀಲೇಶ್ವರಂ ತಾಲೂಕು ಆಸ್ಪತ್ರೆಯ ವೈದ್ಯೆ ಡಾ. ಜೆ. ಅಂಜನಾ ಹಾಗೂ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಆಹಾರ ತಜ್ಞೆ ಕೆ. ಶ್ರುತಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಜೀವನಶೈಲಿ ಸಂಬಂಧಿತ ಕಾಯಿಲೆಗಳ ಪತ್ತೆಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು.


